ಸಾರ್ವಜನಿಕ ಕೇಂದ್ರ ಗ್ರಂಥಾಲಯ ಶ್ರೀಸಾಮಾನ್ಯನ ವಿದ್ಯಾಲಯ ಗ್ರಾಮದ ಜನರು ವಿದ್ಯಾರ್ಥಿಗಳು ಶಾಲೆ ಬಿಟ್ಟ ಮಕ್ಕಳು ಪುಸ್ತಕ ಓದುವುದನ್ನು ನಿಲ್ಲಿಸದೆ ಪುಸ್ತಕ ಓದುವ ಹವ್ಯಾಸವನ್ನು ಮುಂದುವರಿಸಲು ಗ್ರಂಥಾಲಯಗಳು ಸಹಕಾರಿಯಾಗಿವೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ತಿಳಿಸಿದರು
ಅವರು ಹೊನ್ನಾಳಿ ತಾಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕೇಂದ್ರ ಉದ್ಘಾಟಿಸಿ ಮಾತನಾಡಿ ಗ್ರಂಥಾಲಯವನ್ನು ಗ್ರಾಮೀಣ ಭಾಗದ ಜನತೆಗೆ ಸದುಪಯೋಗ ಪಡಿಸಿಕೊಳ್ಳಲು ಪುಸ್ತಕಗಳ ಮೂಲಕ ಜ್ಞಾರ್ನಾಜನೆ ಮಾಡಿಕೊಳ್ಳಲು, ನಿರಂತರ ಕಲಿಕೆಯನ್ನು ಹೊಂದಲು ಗ್ರಾಮ ಪಂಚಾಯತಿ ಗ್ರಂಥಾಲಯಗಳು ನೆರವಾಗುತ್ತಿವೆ. ರಾಜ್ಯದಲ್ಲಿ ಒಟ್ಟು 5766 ಗ್ರಾಮ ಪಂಚಾಯತಿ ಗ್ರಂಥಾಲಯಗಳು ಗ್ರಾಮಾಂತರ ಪ್ರದೇಶಗಳಲ್ಲಿ ಕಾರ್ಯ ನಿರತವಾಗಿರುತ್ತದೆ. ಸರ್ಕಾರದ ಆದೇಶ ಸಂ. ಇಡಿ 64 ಎಲ್ಐಬಿ 2015, ಬೆಂಗಳೂರು ದಿಃ 26-2-2019 ರನುಸಾರ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಸಂಪೂರ್ಣ ನಿರ್ವಹಣೆಯನ್ನು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಗೆ ವರ್ಗಾಯಿಸಲಾಗಿರುತ್ತದೆ. ಮುಂದುವರೆದು, ದಿನಾಂಕ 17-8-2019 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯ ನಡವಳಿಯನುಸಾರ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಹಸ್ತಾಂತರ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.
ಸಾರ್ವಜನಿಕ ಗ್ರಂಥಾಲಯದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವ ಗ್ರಂಥ ಮೇಲ್ವಿಚಾರಕರು ಸ್ಥಳೀಯರಿಗೆ ಅನುಕೂಲವಾಗುವ ರೀತಿಯಲ್ಲಿ ಅವರಿಗೆ ಸ್ಪಂದಿಸಿ ಅವರಿಂದ ಸದಸ್ಯತ್ವ ಪಡೆದು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಲು ಪ್ರೇರೇಪಣೆ ನೀಡಬೇಕೆಂದು ಇದೇ ಸಂದರ್ಭದಲ್ಲಿ ತಿಳಿ ಸಿದರು
ಕಾರ್ಯಕ್ರಮದಲ್ಲಿ ಹಂಗಾಮಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರೇಶ್ ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ್ ಹೆಚ್ ಸಿ. ಚಂದ್ರಕಲಾ ಶಿವಕುಮಾರ್. ಶಿವಕುಮಾರ್ ನಾಯಕ್. ಮೇಲ್ವಿಚಾರಕ ಮಂಜುನಾಥ ನಾಯ್ಕ್. ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.