ಪೊಲೀಸ್ ಅಧಿಕಾರಿಗಳ ಭೇಟಿ

ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕಾರಿಗಳು ಏ. 07
ರಂದು ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ನಗರದ ಹಳೇ
ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು
ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ
ರವರು ಏ. 07 ರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 01.30 ರವರೆಗೆ
ಸಾರ್ವಜನಿಕರಿಂದ ಅಹವಾಲು ಹಾಗೂ ದೂರುಗಳನ್ನು ಸ್ವೀಕರಿಸುವರು.
ದೂರುದಾರರು ಪ್ರಪತ್ರ-1 ಮತ್ತು 2 ರಲ್ಲಿ ಅಫಿಡವಿಟ್‍ನೊಂದಿಗೆ
ಸಲ್ಲಿಸಬಹುದು.
ದೂರುಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ
ಬಾಕಿ ಇದ್ದರೆ ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ
ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Leave a Reply

Your email address will not be published. Required fields are marked *