ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ
ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ
ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ಶಾಲೆಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ,
ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು
ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ
ನೀಡಲಾಗುತ್ತದೆ, ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ,
ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು
ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ
ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪ್ರವೇಶ ಲಭ್ಯವಿದೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ದಾಖಲಾತಿಗಾಗಿ ಪೆÇೀಷಕರ ಆದಾಯಮಿತಿ
ರೂ.2.50 ಲಕ್ಷಗಳಿಗೆ ಮೀರಬಾರದು. ಆಸಕ್ತಿಯುಳ್ಳ ಹಾಗೂ ಅರ್ಹ
ಅಭ್ಯರ್ಥಿಗಳು ಏ.22 ರೊಳಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ
ವಸತಿ ಶಾಲೆಗಳ ಕಛೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದು
ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ
ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ
ಕೊಂಡಜ್ಜಿ, ಹರಿಹರ ತಾ, ಮೊ:9008815296. ಅಲ್ಪಸಂಖ್ಯಾತರ ಮೊರಾರ್ಜಿ
ದೇಸಾಯಿ ವಸತಿ ಶಾಲೆ ಕೆರೆಬಿಳಚಿ, ಚನ್ನಗಿರಿ ತಾ, ಮೊ:9036866642.
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ
ನಿಜಲಿಂಗಪ್ಪ ಬಡಾವಣೆ, ದಾವಣಗೆರೆ ಟೌನ್, ಮೊ:9916828601.
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹೊನ್ನಾಳಿ ತಾ,
ಮೊ:9164855466. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ,
ಜಗಳೂರು ತಾ, ಮೊ: 9964596266 ಕ್ಕೆ ಸಂಪರ್ಕಿಸಬಹುದೆಂದು
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *