ನ್ಯಾಮತಿ:
ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸೇವಾದೀಕ್ಷೆ ಹಾಗೂ ಸಾಹಿತ್ಯ ಚಟುವಟಿಕೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಏಪ್ರಿಲ್ 10ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ ಡಿ.ಎಂ. ಹಾಲಾರಾಧ್ಯ ತಿಳಿಸಿದರು.
ಪಟ್ಟಣದಲ್ಲಿ ಶನಿವಾರ ಕಸಾಪ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಜಿ. ನಿಜಲಿಂಗಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ, ಮಾಜಿ ಶಾಸಕರಾದ ಡಿ.ಜಿ.ಶಾಂತನಗೌಡರು ಮತ್ತು ಡಾ.ಡಿ.ಬಿ.ಗಂಗಪ್ಪ, ಜಿಲ್ಲ ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಮಂಜುನಥ ಕುರ್ಕಿ, ತಹಶೀಲ್ದಾರ್ ಎಂ. ರೇಣುಕಾ, ಉಪತಹಶೀಲ್ದಾರ್ ನ್ಯಾಮತಿ ನಾಗರಾಜಪ್ಪ, ಇಒ ರಾಮಬೋವಿ, ಮುಖ್ಯಾಧಿಕಾರಿ ಬಿ.ಕೆ.ಕೊಟ್ರೇಶಿ, ನೌಕರರ ಸಂಘದ ಅಧ್ಯಕ್ಷ ಜಿ.ಬಿ.ವಿಜಯಕುಮಾರ, ಎಸ್‍ಐ ಪಿ.ಎಸ್.ರಮೇಶ, ಕಲ್ಯಾಣ ಮಂದಿರದ ಗೌರವಾಧ್ಯಕ್ಷ ಎನ್.ಕೆ. ವಿಶ್ವರಾದ್ಯರು ಬರಲಿದ್ದಾರೆ ಎಂದರು.
ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಬಿ.ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ, ರಾಘವೇಂದ್ರ ನಾಯರಿ, ಮಾಜಿ ಅಧ್ಯಕ್ಷ ಉಜ್ಜಿನಪ್ಪ ಹಾಗೂ ತಾಲ್ಲೂಕು ಕಸಾಪ ಅಧ್ಯಕ್ಷರಾದ ದಾವಣಗೆರೆ ಸುಮತಿಜಯಪ್ಪ, ಚನ್ನಗಿರಿ ಎಲ್.ಜಿ. ಮಧುಕುಮಾರ, ಹೊನ್ನಾಳಿ ಜಿ. ಮುರಿಗೆಪ್ಪಗೌಡ, ಹರಿಹರ ಡಿ.ಎಂ.ಮಂಜುನಾಥಯ್ಯ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕøತ ಗೃಹರಕ್ಷಕದಳದ ಎಂ. ರಾಘವೇಂದ್ರ ಅವರನ್ನು ಸನ್ಮಾನಿಸಲಾಗುವುದು ಎಂದರು.
ಕಾರ್ಯಕ್ರಮಕ್ಕೆ ಅಜೀವ ಸದಸ್ಯರು, ತಾಲ್ಲೂಕಿನ ಕನ್ನಡ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಿಕಟಪೂರ್ವ ಅಧ್ಯಕ್ಷ ಜಿ. ನಿಜಲಿಂಗಪ್ಪ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿಗಳಾದ ಎಸ್.ಜಿ.ಬಸವರಾಜಪ್ಪ, ಬಿ.ಜಿ.ಚೈತ್ರಾ, ಸzಸ್ಯರಾದ ಬಂಡಿ ಈಶ್ವರಪ್ಪ, ಡಿ.ಎಂ. ವಿಜೇಂದ್ರ, ವೆಂಕಟೇಶನಾಯ್ಕ, ತೀರ್ಥಲಿಂಗಪ್ಪ, ಚಂದ್ರೇಗೌಡ, ಜಿ.ಕುಬೇರಪ್ಪ ಇದ್ದರು.