ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸಂಬಂದ ಪಟ್ಟ ಸಚಿವರೊಂದಿಗೆ ಮಾತನಾಡಿ ಆದಷ್ಟು ಬೇಗ ಅವಳಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪಟ್ಟಣದ ಮಹಾಂತೇಶ ವೀರಶೈವ ಕಲ್ಯಾಣ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ನೂತನ ಅಧ್ಯಕ್ಷರು ಮತ್ತು ಪದಾಧೀಕಾರಿಗಳ ಸೇವಾದೀಕ್ಷೆ ಹಾಗೂ ಸಾಹಿತ್ಯ ಚಟುವಟಿಕೆಗಳ ಚಾಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕನ್ನಡ ನಮ್ಮ ಮಾತೃ ಭಾಷೆ ನಾವು ಕನ್ನಡಕ್ಕೆ ಮೊದಲ ಆಧ್ಯತೆ ಪ್ರಾತಿನಿಧ್ಯ ನೀಡ ಬೇಕು, ನಂತರ ವ್ಯವಹಾರಿಕ ಹಾಗೂ ಉದ್ಯೋಗದ ದೃಷ್ಟಿಯಿಂದ ಬೇರೆ ಭಾಷೆಗಳಿಗೆ ಪಾತಿನಿಧ್ಯ ನೀಡುವಂತೆ ಸೂಚಿಸಿದರು.
ಅವಳಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡ ಬೇಕೆಂಬ ಬೇಡಿಕೆ ಇದ್ದು ಸಂಬಂದ ಪಟ್ಟ ಸಚಿವರೊಂದಿಗೆ ಮಾತನಾಡಿ, ಡಿಸೆಂಬರ್ ಅಂತ್ಯದ ಒಳಗಾಗೀ ಅವಳಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡಲಾಗುವುದು ಎಂದರು.
ಅವಳಿ ತಾಲೂಕಿನ ಕೆರೆಗಳನ್ನು ತುಂಬಿಸುವ ದೃಷ್ಟಿಯಿಂದ 528 ಕೋಟಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದ್ದು ಸದ್ಯದರಲ್ಲೇ ಅವಳಿ ತಾಲೂಕಿನ ಕೆರೆಗಳನ್ನು ತುಂಬಿಸಲಾಗುವುದು ಎಂದರು.
ಇನ್ನು ನ್ಯಾಮತಿ ಪಟ್ಟಣದಲ್ಲಿ ಯುಜಿಡಿ ಹಾಗೂ ಕುಡಿಯುವ ನೀರಿನ ಯೋಜನೆಗೆ 77 ಕೋಟಿ ಅನುದಾನ ಬಿಡುಗಡೆಯಾಗಿದ್ದು ಸದ್ಯದರಲ್ಲದೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದು ಅವರನ್ನು ಈ ಭಾಗದ ಜನರು ಅವಿರೋಧವಾಗಿ ಆಯ್ಕೆ ಮಾಡುವಂತೆ ಕರೆ ನೀಡಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಮನವಿ ಮಾಡಿದ್ದು ಅವರು ಮನವಿಗೆ ಸ್ಪಂಧಿಸಿ ಆದಷ್ಟು ಬೇಗ ಕನ್ನಡಭವನ ನಿರ್ಮಾಣ ಮಾಡುವುದಾಗಿ ಹೇಳಿದ್ದು ನಾನು ಅವರಿಗೆ ಆಬಾರಿಯಾಗಿರುತ್ತೇನೆ ಎಂದರು.
ಇದೇ ವೇಳೆ ನಿಕಟಪೂರ್ವ ಅಧ್ಯಕ್ಷರಾದ ಜಿ.ನಿಜಲಿಂಗಪ್ಪನವರು ನೂತನ ಅಧ್ಯಕ್ಷರಾದ ಡಿ.ಎಂ ಆಲಾರಾಧ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭ ನಿಕಟಪೂರ್ವ ಜಿಲ್ಲಾದ್ಯಕ್ಷರಾದ ಮಂಜುನಾಥ್ ಕುರ್ಕಿ, ಉಪತಹಶೀಲ್ದಾರ್ ನಾಗರಾಜ್ ಸೇರಿದಂತೆ ಮತ್ತೀತತರರಿದ್ದರು.\