ಜಗಜೀವನ್‍ರಾಂ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ
ದಾವಣಗೆರೆ ಇವರುಗಳ ಸಂಯುಕ್ತಾಶ್ರದಲ್ಲಿ ಏಪ್ರಿಲ್ 14 ರ
ಗುರುವಾರದಂದು ಬೆಳಿಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಆವರಣ
ದಾವಣಗೆರೆ ಇಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಹಾಗೂ ವಿಶ್ವಜ್ಞಾನಿ
ಡಾ.ಬಿ.ಆರ್.ಅಂಬೇಡ್ಕರ್‍ರವರ 131ನೇ ಜನ್ಮ ದಿನಾಚರಣೆ ಹಾಗೂ ಹಸಿರು
ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ
ಉಪಪ್ರಧಾನಿ ಡಾ.ಬಾಬು ಜಗಜೀವನ್‍ರಾಂ ರವರ 115ನೇ
ಜನ್ಮದಿನಾಚರಣೆಯನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ
ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ) ಉದ್ಘಾಟಿಸುವರು.
ಶಾಸಕರಾದ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆಯನ್ನು
ವಹಿಸುವರು.
ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ, ಮಾನ್ಯ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ
ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿ ಶಾಸಕ ಹಾಗೂ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು
ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ,
ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ
ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ
ಎಸ್.ವಿ.ರಾಮಚಂದ್ರ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು
ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ
ಪ್ರೊ.ಎನ್.ಲಿಂಗಣ್ಣ, ಸರ್ಕಾರದ ಮುಖ್ಯ ಸಚೇತಕರು ಹಾಗೂ
ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ ಗೌರವಾನ್ವಿತ
ಉಪಸ್ಥಿತರಾಗಿ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಶಾಮನೂರು
ಶಿವಶಂಕರಪ್ಪ, ಎಸ್.ರಾಮಪ್ಪ, ವಿಧಾನ ಪರಿಷತ್ ಶಾಸಕರಾದ
ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ
ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು
ಮಂಜುನಾಥ್, ಎಸ್.ಎಲ್ ಭೋಜೇಗೌಡ, ಚಿದಾನಂದ.ಎಂ.ಗೌಡ,
ಆರ್.ಶಂಕರ್, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಮಹಾನಗರ ಪಾಲಿಕೆಯ
ಪೂಜ್ಯ ಮಹಾಪೌರರಾದ ಆರ್.ಜಯಮ್ಮ, ದೂಢಾ ಅಧ್ಯಕ್ಷರಾದ
ಕೆ.ಎಂ ಸುರೇಶ್ ಪಾಲ್ಗೊಳ್ಳುವರು.
 ಅಂದು ಬೆಳಿಗ್ಗೆ 09 ಗಂಟೆಗೆ ಸರಿಯಾಗಿ ಮೆರವಣಿಗೆಯನ್ನು
ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರಾರಂಭಿಸಿ ಜಯದೇವ ವೃತ್ತ,
ಅಶೋಕ ರಸ್ತೆ, ಗಾಂಧೀ ವೃತ್ತ, ಪಿ.ಬಿ.ರಸ್ತೆಯ ಮಾರ್ಗವಾಗಿ
ಮಹಾನಗರ ಪಾಲಿಕೆಯವರೆಗೆ ತಲುಪಿ ನಂತರ ವೇದಿಕೆ
ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದಲ್ಲಿ  ಡಾ.ಬಾಬು ಜಗಜೀವನರಾಂ ರವರ ಕುರಿತು
ದಾವಣಗೆರೆ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ.ಹೆಚ್. ವಿಶ್ವನಾಥ್
ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಕುರಿತು ಚಿಂತಕರಾದ ಡಾ. ಎ.ಬಿ
ರಾಮಚಂದ್ರಪ್ಪ ರವರು ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ.
ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆಯ ಸರ್ವ
ಸದಸ್ಯರು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ
ದಲಿತ ಹಾಗೂ ಪ್ರಗತಿಪರ ಸಂಘಟನೆಯ ಮುಖಂಡರು,
ಸಮಾಜದ ಮುಖಂಡರು, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ
ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್
ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಮಹಾನಗರ
ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಜಿಲ್ಲಾ ಸಮಾಜ ಕಲ್ಯಾಣ
ಉಪನಿರ್ದೇಶಕರಾದ ಕೌಸರ್ ರೇಷ್ಮಾ.ಜಿ, ಕನ್ನಡ ಮತ್ತು ಸಂಸ್ಕøತಿ
ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಇವರುಗಳು

ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *