ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ 46 ಗ್ರಾ.ಪಂ ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಕೆಂಚಿಕೊಪ್ಪ ಗ್ರಾಮದಲ್ಲಿ 17 ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ 46 ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ 27 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸುತ್ತಿದ್ದು ಅದರಲ್ಲಿ ಕೆಲವು ಉದ್ಘಾಟನೆಯಾಗಿದ್ದು ಇನ್ನು ಕೆಲವು ಘನತ್ಯಾಜ್ಯ ವಿಲೇವಾರಿ ಘಟಕಗಳ ಕಾಮಗಾರಿ ಪ್ರಗತಿಯಲ್ಲಿದೇ ಎಂದರು.
ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಜಾಗದ ಸಮಸ್ಯೆ ಇಂದ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ ಅವುಗಳನ್ನು ಬೇರೆ ಗ್ರಾಮಪಂಚಾಯಿತಿಗಳೊಂದಿಗೆ ವಿಲೀನ ಮಾಡಿದ್ದು ಜಾಗದ ಸಮಸ್ಯೆ ಬಗೆ ಹರಿದ ನಂತರ ಅಲ್ಲಿಯೂ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ಪ್ರಸ್ತುತ 27 ಗ್ರಾಮ ಪಂಚಾಯಿತಿಗಳಲ್ಲೂ ವಾಹನದ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ಜನರು ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ತಮ್ಮ ಮನೆಯ ಪರಿಸರ ಹಾಗೂ ಗ್ರಾಮದ ಪರಿಸರವನ್ನು ಸ್ವಚ್ಚವಾಗಿಟ್ಟಿಕೊಳ್ಳುವಂತೆ ಕಿವಿ ಮಾತು ಹೇಳಿದರು.
ಗ್ರಾಮಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಕೇವಲ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಕೆಲಸ ಮಾತ್ರವಲ್ಲಾ ಅದು ಎಲ್ಲರ ಜವಾಬ್ದಾರಿಯಾಗಿದ್ದು ಪ್ರತಿಯೊಬ್ಬರೂ ಕೂಡ ಗ್ರಾಮವನ್ನು ಸ್ವಚ್ಚವಾಗಿಟ್ಟುಕೊಳ್ಳಲು ಕೈಜೋಡಿಸುವಂತೆ ಕರೆ ನೀಡಿದರು.
ಪ್ರತಿಯೊಂದು ಗ್ರಾಮವನ್ನು ಕಸಮುಕ್ತಗೊಳಿಸಲು ಸಹಕಾರ ನೀಡ ಬೇಕೆಂದ ಶಾಸಕರು, ಪ್ರತಿಯೊಂದು ಮನೆಗೆ ಕಸ ವಿಲೇವಾರಿ ವಾಹನ ಬರಲಿದ್ದು ಜನರು ಸಂಗ್ರಹಿಸಿದ ಕಸವನ್ನು ಅದರಲ್ಲಿ ಹಾಕುವ ಮೂಲಕ ಗ್ರಾಮವನ್ನು ಸ್ವಚ್ಚವಾಗಿಟ್ಟುಕೊಳ್ಳ ಬೇಕೆಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಸ್ವತಃ ಪೊರಕೆ ಹಿಡಿದು ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.ಅದೇ ರೀತಿ ನಾನು ಕೂಡ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲೂ ಸ್ವಚ್ಚಭಾರತ್ ಆಂದೋಲನ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೆ ಎಂದರು.
ಈ ಸಂದರ್ಭ ಇಓ ರಾಮಾಬೋವಿ, ಸಹಾಯಕ ಕಾರ್ಯಪಾಲಕ ಅಭಿಯಂತರರು ಅಜ್ಜಪ್ಪ ಸೇರಿದಂತೆ ಗ್ರಾ.ಪಂ ಅಧ್ಯಕ್ಷರಾದ ಪ್ರಕಾಶ್, ಉಪಾಧ್ಯಕ್ಷರಾದ ಗುತ್ಯಮ್ಮ ಅಶೋಕಪ್ಪ, ಸದಸ್ಯರಾದ ಗಿರೀಶ್ ಜಿ.ಎಚ್, ಚಂದ್ರಪ್ಪ.ಬಿ.ಇ, ಜಾನಮ್ಮ,ಶಿಲ್ಪಾ, ಲಕ್ಷ್ಮಮ್ಮ, ಕವಿತಾ, ವಿರೇಶ್, ತಿಮ್ಮೇಶ್,ಕಾವೇರಿ ಸೇರಿದಂತೆ ಗ್ರಾಮದ ಮುಖಂಡರಿದ್ದರು.