ಸಾಸ್ವೆಹಳ್ಳಿ ಯ ನಾಡಕಚೇರಿಯಲ್ಲಿ ಉಪ ತಹಸೀಲ್ದಾರ್ ಪರಮೇಶ್ ನಾಯಕ್ ಇವರ ನೇತೃತ್ವದಲ್ಲಿ ಅಂಬೇಡ್ಕರ್ ದಿನಾಚರಣೆಯ ಕಾರ್ಯಕ್ರಮ ನಡೆಯಿತು
ಇದೇ ಸಂದರ್ಭದಲ್ಲಿ ಮಾತನಾಡಿದ ಉಪತಹಶೀಲ್ದಾರ್ ಪರಮೇಶ್ವರ ನಾಯಕ್. ಭಾರತ ದೇಶಕ್ಕೆ ಸಂವಿಧಾನ ರಚನೆ ಮಾಡಿ ದಲಿತರು ಹಾಗೂ ಮಹಿಳೆಯರು ಹಿಂದುಳಿದವರ ಬಡವರ ಏಳಿಗೆಗಾಗಿ ಸಂವಿಧಾನದಲ್ಲಿ ಶಿಕ್ಷಣ ಆರೋಗ್ಯ ಉದ್ಯೋಗ ಮೀಸಲಾತಿ ಬಗ್ಗೆ ಅವರು ಮಾಡಿದ ಸಂದರ್ಭದಿಂದ ಇಲ್ಲಿವರೆಗೂ 18 ವರ್ಷ ಮೇಲ್ಪಟ್ಟವರಿಗೆ ಮತದಾನ ಮಾಡುವ ಹಕ್ಕನ್ನು ನೀಡಿದ್ದು ಇದರಿಂದ ಮತದಾನ ಮಾಡುವ ಮೂಲಕ ಚುನಾಯಿತ ಪ್ರತಿನಿಧಿಗಳನ್ನು ಆರಿಸುವ ಹಕ್ಕು ಮತದಾರರಿಗೆ ಇದೆ ಎಂದು ಅದರ ಮಹತ್ವವನ್ನು ತಿಳಿಸಿದ್ದಾರೆ.
ಒಬ್ಬ ವ್ಯಕ್ತಿ ಸಮಾಜದಲ್ಲಿ ಮುಂದುವರಿಯಬೇಕಾದರೆ ಶಿಕ್ಷಣ ಮುಖ್ಯ. ಹಣಕ್ಕಿಂತ ಹೆಚ್ಚಾಗಿ ಶಿಕ್ಷಣವನ್ನು ಪಡೆದ ವ್ಯಕ್ತಿ ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಾನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
2) ಸಾಸ್ವೆಹಳ್ಳಿ ಗ್ರಾಮ ಪಂಚಾಯಿತಿಯಲ್ಅಂಬೇಡ್ಕರ್ ಜನ್ಮ ದಿನಾಚರಣೆ.
ಸಾಸ್ವೆಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧಾ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಮೇಶ್ ಕೊಳ್ಳೋರ್. ಮಾತನಾಡಿದರು
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಶಾಂತಮ್ಮ ಸದಸ್ಯರಾದ ಕರಿಬಸಪ್ಪ ಸವಿತಾ ಇತರರು ಪಾಲ್ಗೊಂಡಿದ್ದರು.
3) ರಾಂಪುರ ಗ್ರಾಮ ಪಂಚಾಯತಿಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಇವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ಹಾಗೂ ಸದಸ್ಯರು ಮತ್ತು ಪಿಡಿಒ ರಾಘವೇಂದ್ರ ಉಪಸ್ಥಿತರಿದ್ದರು.
3) ಡಿವಿಎಸ್ ಕಾಲೇಜಿನಲ್ಲಿ ಅಂಬೇಡ್ಕರ್ ದಿನಾಚರಣೆ
ಸಾಸ್ವೆಹಳ್ಳಿ ಆದಿದ್ರಾವಿಡ ವಿದ್ಯಾಸಂಸ್ಥೆಯಲ್ಲಿ ಅಂಬೇಡ್ಕರ್ ಅವರ 131ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಸ್ಥಾಪಕ ಅಧ್ಯಕ್ಷಡಾ : ಎಸ್ ಹೆಚ್. ಕೃಷ್ಣಮೂರ್ತಿ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು