ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.
ಬಸವರಾಜ (ಬೈರತಿ) ಅವರು ಏ. 18 ರಿಂದ 20 ರವರೆಗೆ ಮೂರು
ದಿನಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಏ. 18 ರಂದು ಸಂಜೆ ಹುಬ್ಬಳ್ಳಿಯಿಂದ ಹೊರಟು, ರಾತ್ರಿ 08
ಗಂಟೆಗೆ ದಾವಣಗೆರೆಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ
ಮಾಡುವರು. ಏ. 19 ರಂದು 8.30 ರಿಂದ ಸಂಜೆ 05 ಗಂಟೆಯವರೆಗೆ
ಜಿಎಂಐಟಿ ಕಾಲೇಜು ಇಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಸಭೆ,
ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ದಾವಣಗೆರೆಯಲ್ಲಿ ವಾಸ್ತವ್ಯ
ಮಾಡುವರು. ಏ. 20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01
ಗಂಟೆಯವರೆಗೆ ದಾವಣಗೆರೆಯಲ್ಲಿ ಪಕ್ಷದ ವತಿಯಿಂದ
ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಚಿವರು
ಅದೇ ದಿನ ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ಜಿಲ್ಲೆಗೆ ಪ್ರಯಾಣ
ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.