ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಏಪ್ರಿಲ್ 22 ರಿಂದ ಮೇ. 18
ರವರೆಗೆ ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು,
ಪರೀಕ್ಷೆಯನ್ನು ಸುಗಮವಾಗಿ ಜರುಗಿಸುವ ಉದ್ದೇಶದಿಂದ ಪರೀಕ್ಷಾ
ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ 200
ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ
ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.
ಆದೇಶದನ್ವಯ ಪರೀಕ್ಷಾ ದಿನಗಳಂದು ಪರೀಕ್ಷಾ
ಕೇಂದ್ರಗಳ ಸುತ್ತ ಮುತ್ತಲಿರುವ ಜೆರಾಕ್ಸ್, ಸೈಬರ್ ಕೆಫೆ
ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ
ಮುಚ್ಚಬೇಕು. ಪರೀಕ್ಷೆಯ ಕರ್ತವ್ಯ ನಿರ್ವಹಿಸಲು
ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನಿಷೇಧಾಜ್ಞೆ
ಅನ್ವಯಿಸುವುದಿಲ್ಲ. ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ
ಬಿಡಲು ಬರುವ ಪೋಷಕರು ಯಾವುದೆ ಕಾರಣಕ್ಕೂ ಪರೀಕ್ಷಾ
ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು
ವಾಹನಗಳ ಪಾರ್ಕಿಂಗ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಪರೀಕ್ಷಾ
ಕೇಂದ್ರಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು ಮತ್ತು
ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿರುವ ಜೆರಾಕ್ಸ್, ಸೈಬರ್
ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸಲು ಮತ್ತು
ಇತರೆ ಕ್ರಮಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಕ್ರಮ
ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.