. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ
ನೌಕರರ ಸಂಘ, ಜಿಲ್ಲಾ ಶಾಖೆ-ದಾವಣಗೆರೆ ಇವರುಗಳ
ಸಂಯುಕ್ತಾಶ್ರದಲ್ಲಿ ಏಪ್ರಿಲ್ 21 ರ ಗುರುವಾರದಂದು ಮಧ್ಯಾಹ್ನ
12.30ಕ್ಕೆ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ
ದಾವಣಗೆರೆ ಇಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ
ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ-2022
ವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ
ಸಚಿವರಾದ ಬಿ.ಎ.ಬಸವರಾಜ(ಭೈರತಿ) ಉದ್ಘಾಟಿಸುವರು. ಶಾಸಕರಾದ
ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆಯನ್ನು ವಹಿಸುವರು.
ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ, ಮಾನ್ಯ ಮುಖ್ಯಮಂತ್ರಿಗಳ
ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ
ಎಂ.ಪಿ.ರೇಣುಕಾಚಾರ್ಯರವದರು ಸವೋತ್ತಮ ಸೇವಾ ಪ್ರಶಸ್ತಿ
ಪ್ರದಾನ ಮಾಡುವರು.
 ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ
ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್
ವಿರೂಪಾಕ್ಷಪ್ಪ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ
ಎಸ್.ವಿ.ರಾಮಚಂದ್ರ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು
ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ
ಪ್ರೊ.ಎನ್.ಲಿಂಗಣ್ಣ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ
ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ ಗೌರವಾನ್ವಿತ
ಉಪಸ್ಥಿತರಾಗಿ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಶಾಮನೂರು
ಶಿವಶಂಕರಪ್ಪ, ಎಸ್.ರಾಮಪ್ಪ, ವಿಧಾನ ಪರಿಷತ್ ಶಾಸಕರಾದ ಮೋಹನ್
ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್,
ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ,
ಚಿದಾನಂದ.ಎಂ.ಗೌಡ, ಆರ್.ಶಂಕರ್, ಡಿ.ಎಸ್ ಅರುಣ್, ಕೆ.ಎಸ್ ನವೀನ್,
ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಆರ್.ಜಯಮ್ಮ,
ದೂಢಾ ಅಧ್ಯಕ್ಷರಾದ ಕೆ.ಎಂ ಸುರೇಶ್ ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಜನಸ್ನೇಹಿ ಆಡಳಿತದ ಕುರಿತು ದಾವಣಗೆರೆ
ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಪ್ರಾಂಶುಪಾಲರಾದ
ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ರವರು ವಿಶೇಷ ಉಪನ್ಯಾಸವನ್ನು
ನೀಡಲಿದ್ದಾರೆ.
ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಚುನಾಯಿತ
ಪ್ರತಿನಿಧಿಗಳು, ಗಣ್ಯರು, ಜಿಲ್ಲಾ ಹಾಗೂ ತಾಲ್ಲೂಕು ಸರ್ಕಾರಿ ನೌಕರರ
ಸಂಘದ ಪದಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್
ಉಮಾಶಂಕರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್
ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ
ಅಧಿಕಾರಿ ಡಾ.ಎ.ಚನ್ನಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ
ಶಾಖೆ ದಾವಣಗೆರೆಯ ಜಿಲ್ಲಾಧ್ಯಕ್ಷರಾದ ಬಿ. ಪಾಲಾಕ್ಷಿ ಇವರುಗಳು
ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *