ಮಾಸಡಿ ಗ್ರಾಮದಲ್ಲಿ ಶನಿವಾರ ಕಂಬದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಹೊನ್ನಾಳಿ:ತಾಲೂಕಿನ ಮಾಸಡಿ ಗ್ರಾಮದಲ್ಲಿ ಶನಿವಾರ ಕಂಬದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.ವಿವಿಧ ಹೂವುಗಳಿಂದ, ಪುಷ್ಪಮಾಲಿಕೆಗಳಿಂದ ರಥವನ್ನು ಭರ್ಜರಿಯಾಗಿ ಅಲಂಕರಿಸಲಾಗಿತ್ತು. ರಥಕ್ಕೆ ಮಂಡಕ್ಕಿ, ಮೆಣಸಿನಕಾಳು, ಬಾಳೆಹಣ್ಣು ಇತ್ಯಾದಿಗಳನ್ನು ಅರ್ಪಿಸುವ ಮೂಲಕ ಭಕ್ತರು ತಮ್ಮ ಹರಕೆ…