ಹೊನ್ನಾಳಿ:
ತಾಲೂಕಿನ ಮಾಸಡಿ ಗ್ರಾಮದಲ್ಲಿ ಶನಿವಾರ ಕಂಬದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ವಿವಿಧ ಹೂವುಗಳಿಂದ, ಪುಷ್ಪಮಾಲಿಕೆಗಳಿಂದ ರಥವನ್ನು ಭರ್ಜರಿಯಾಗಿ ಅಲಂಕರಿಸಲಾಗಿತ್ತು. ರಥಕ್ಕೆ ಮಂಡಕ್ಕಿ, ಮೆಣಸಿನಕಾಳು, ಬಾಳೆಹಣ್ಣು ಇತ್ಯಾದಿಗಳನ್ನು ಅರ್ಪಿಸುವ ಮೂಲಕ ಭಕ್ತರು ತಮ್ಮ ಹರಕೆ ತೀರಿಸಿದರು. ರಥಕ್ಕೆ ಅರ್ಪಿಸಿದ ಮೆಣಸಿನಕಾಳುಗಳನ್ನು ತಿಂದರೆ ಒಳ್ಳೆಯದು ಎನ್ನುವ ಭಾವನೆ ಭಕ್ತರಲ್ಲಿ ಇರುವ ಕಾರಣ ನೆಲದ ಮೇಲೆ ಬಿದ್ದ ಮೆಣಸಿನಕಾಳುಗಳನ್ನು ಆಯ್ದುಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.
ರಥೋತ್ಸವದ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪಾರಂಪರಿಕ ಶ್ರದ್ಧಾ-ಭಕ್ತಿಗಳಿಂದ ನಡೆದವು.