ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿರುವ
ಯಲವಟ್ಟಿ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು
ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ
ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ
ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
       ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ
ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30
ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು
ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ
ಸಲ್ಲಿಸಬೇಕು. ಅವಧಿಯ ನಂತರ ಬಂದ ಅರ್ಜಿಗಳನ್ನು
ಸ್ವೀಕರಿಸಲಾಗುವುದಿಲ್ಲ.
ನ್ಯಾಯಬೆಲೆ ಅಂಗಡಿ ಮಂಜೂರು ಮಾಡುವಾಗ ಕರ್ನಾಟಕ ಅಗತ್ಯ
ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ(ನಿಯಂತ್ರಣ) ಆದೇಶ 2018
ರಲ್ಲಿ ಆದ್ಯತೆಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾ ಆಹಾರ
ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ
ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *