ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆಗೆ ನೇಮಕ
ಗ್ರಾಮಾಂತರ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷ
ಸಂಘಟನೆಗೆ ಹೆಚ್ಚಿನ ಒತ್ತು: ರಾಘವೇಂದ್ರ ಗೌಡ
ದಾವಣಗೆರೆ: ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆ ಮೂಲಕ ಕಾಂಗ್ರೆಸ್ ಪಕ್ಷವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಇನ್ನಷ್ಟು ಬಲಪಡಿಸಲಾಗುವುದು ಎಂದು ಜಿಲ್ಲಾ ಸಂಚಾಲಕರಾದ ಜಿ.ಆರ್. ರಾಘವೇಂದ್ರ ಗೌಡ ಉರಲಕಟ್ಟೆ ತಿಳಿಸಿದರು.ಇಂದು ಬೆಳಿಗ್ಗೆ ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನ್ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಈ ಸಂಘಟನೆಯು ಕಾಂಗ್ರೆಸ್ ಪಕ್ಷದ…