ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 28 ಮತ್ತು 37ನೇ ವಾಡ್ ್ಗಳಿಗೆ ಮೇ 20ರಂದು ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷಿಗಳಿಗೆ ನಾಳೆ ಅಂದರೆ ಮೇ 2ರಿಂದ ಅರ್ಜಿ ವಿತರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಸೂಚನೆ ಮೇರೆಗೆ ನಾಳೆಯಿಂದ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಜನಸಂಪರ್ಕ ಕಛೇರಿಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು.
ಆದ ಕಾರಣ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷಿಗಳು ನಾಳೆಯಿಂದ ಅರ್ಜಿಗಳನ್ನು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಜನಸಂಪರ್ಕ ಕಛೇರಿಯಲ್ಲಿ ಮೇ 5ರವರೆಗೆ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯೊಳಗಾಗಿ ಪಡೆಯಬಹುದಾಗಿದೆ ಎಂದು ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.