ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 28 ಮತ್ತು 37ನೇ ವಾರ್ಡ್‍ಗಳಿಗೆ ಮೇ 20ರಂದು ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಜೆ ಆಕಾಂಕ್ಷಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಜಿ.ಎಸ್.ಮಂಜುನಾಥ್, ಮುಖಂಡ ಗಣೇಶ್ ಹುಲ್ಲುಮನಿ ಮಾತನಾಡಿ ಪಕ್ಷ ಯಾರೇ ಅಭ್ಯರ್ಥಿಗಳನ್ನು ಸೂಚಿಸಿದರು ಅವರಿಗೆ ಬೆಂಬಲವಾಗಿ ಚುನಾವಣೆ ಎದುರಿಸಬೇಕೆಂದು ಕರೆ ನೀಡಿದರು.
ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷಿಗಳು, ಮುಖಂಡರು, ಕಾರ್ಯಕರ್ತರು ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಸೂಚಿಸುವ ಅಭ್ಯರ್ಥಿ ಪರ ಒಮ್ಮತದಿಂದ ಚುನಾವಣೆ ನಡಸಲಾಗುವುದು ಎಂದು ತಿಳಿಸಿದರು.
ವೇದಿಕೆಯಲ್ಲಿ ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಹೆಚ್.ವೀರಭದ್ರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಉದಯಕುಮಾರ್, ಸದಸ್ಯ ಅಬ್ದುಲ್ ಲತೀಫ್, ಕೋಳಿ ಇಬ್ರಾಹಿಂ ಮತ್ತಿತರರಿದ್ದರು.

Leave a Reply

Your email address will not be published. Required fields are marked *