ನ್ಯಾಮತಿ: ಉದ್ಯೋಗ ಖಾತ್ರಿ ಯೋಜನೆ ಸಂಬಂಧ ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಎರಡು ಯುವಕರು ಮಧ್ಯೆ ಗಲಾಟೆ ನಡೆದಿದೆ.

ನರೇಗಾ ಯೋಜನೆಯಡಿ ಕೆಲಸ ನೀಡುವ ವಿಚಾರದಲ್ಲಿ ಪರಸ್ಪರ ಮಾತಿನ ಚಕಮಕಿ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ. ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಪರಸ್ಪರ ಹಲ್ಲೆಗಿಳಿದಿದ್ದಾರೆ. ಈ ಸಂಬಂಧ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿರುವುದಾಗಿ ಬಿದರಹಳ್ಳಿ ಸಿದ್ದೇಶ್ ಮತ್ತು ಗಿರೀಶ್ ನಾಯಕ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ಪಿ.ಎಸ್.ರಮೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *