ಹೊನ್ನಾಳಿ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.
ಹಿರೇಗೋಣಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ ರೇಣುಕಾಚಾರ್ಯ ಇದೇ ತಿಂಗಳ 21 ರಂದು ಹಿರೇಗೋಣಿಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಗ್ರಾಮಪಂಚಾಯಿತಿಯವರು ಹಾಗೂ ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಕಿವಿ ಮಾತು ಹೇಳಿ ಮಾತನಾಡಿದರು.
ಜನರು ತಮ್ಮ ಕೆಲಸ ಕಾರ್ಯಗಳಿಗಾಗೀ ಸರ್ಕಾರಿ ಕಚೇರಿಗಳನ್ನು ಅಲೆಯ ಬೇಕಾಗಿತ್ತು. ಆದರೇ ಇದೀಗ ಸರ್ಕಾರವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮೂಲಕ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆ ಆಲಿಸುವ ಕೆಲಸ ಮಾಡುತ್ತಿದ್ದು ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.
ಮಧ್ಯವರ್ತಿಗಳ ಹಾವಳಿಯಿಂದ ಸರ್ಕಾರಿ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿರಲಿಲ್ಲಾ, ಆದರೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮೂಲಕ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಅನುಕೂಲವಾಗಿದೆ ಎಂದರು.
ಭಗರ್ ಹಕ್ಕುಂ ಅಧ್ಯಕ್ಷ ಸ್ಥಾನವನ್ನು ಶಾಸಕರು ಯಾರಿಗೂ ಬಿಟ್ಟು ಕೊಡುವುದಿಲ್ಲಾ ಆದರೇ ನಾನು ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕಿನಲ್ಲಿ ಭಗರ್ ಹುಕ್ಕುಂ ಕಮಿಟಿ ಅಧ್ಯಕ್ಷರನ್ನು ಸಂಬಂಧ ಪಟ್ಟ ಸಚಿವರೊಂದಿಗೆ ಮಾತನಾಡಿ ಅವಳಿ ತಾಲೂಕಿಗೆ ನೇಮಕ ಮಾಡಿದ್ದೇನೆ ಎಂದರು.
ಈ ಭಾಗದಲ್ಲಿ ಫವರ್ ಸ್ಟೇಷನ್ ನಿರ್ಮಾಣ ಮಾಡುತ್ತಿದ್ದು ಈಗಾಗಲೇ ಟೆಂಡರ್ ಪ್ರಕ್ರಿಯೇ ಆರಂಭವಾಗಿದ್ದು ಸದ್ಯದರಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ಈ ಭಾಗದ ಕೆರೆ ತುಂಬಿಸಲು 59 ಕೋಟಿ ರೂಪಾಯಿ ಬಿಡುಗಡೆ ಮಾಡಿಸಿದ್ದು ಇದರಲ್ಲಿ ಕೆರೆ ತುಂಬಿಸುವ ಜೊತೆಗೆ ಕೆರೆಗಳ ಹೂಳೆತ್ತುವ ಜೊತೆಗೆ ಕರೆಯನ್ನು ಅಭಿವೃದ್ದಿ ಪಡಿಸಲು ಹಣವನ್ನು ಮೀಸಲಿಟ್ಟದ್ದೇನೆ ಎಂದರು.
ನೀವು ಸರ್ಕಾರದ ಪಾಲುದಾರರು ನಾವು ನಿಮ್ಮ ಬಳಿ ಬಂದಾಗ ನಿಮ್ಮ ಸಮಸ್ಯೆ ಏನು ಎಂದು ಹೇಳುತ್ತೀರಿ. ಆಗಾಗೀ ನಾವೇ ನಿಮ್ಮ ಮನೆ ಬಾಗಿಲಿಗೆ ಬರುವ ಮೂಲಕ ನಿಮ್ಮ ಸಮಸ್ಯೆಯನ್ನು ಹಾಲಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಅವಳಿ ಗ್ರಾ.ಪಂಗಳ ಸಹಯೋಗದೊಂದಿಗೆ ಕಾರ್ಯಕ್ರಮ : ಬೇಲಿಮಲ್ಲೂರು ಹಾಗೂ ಹಿರೇಗೋಣಿಗೆರೆ ಗ್ರಾಮ ಪಂಚಾಯಿತಿಗಳ ಸಹಯೋಗದೊಂದಿಗೆ ಹಿರೇಗೋಣಿಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೇಣುಕಾಚಾರ್ಯ ತಿಳಿಸಿದರು. ಈಗಾಗಲೇ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಸಾಕಷ್ಟು ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅದು ಅತ್ಯಂತ ಯಶಸ್ವಿಯಾಗ ಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಸರ್ಕಾರದ ಯಾವುದೇ ಅನುದಾನ ಬರುವುದಿಲ್ಲಾ, ಗ್ರಾಮ ಪಂಚಾಯಿತಿ ಹಾಗೂ ಗ್ರಾಮದ ಮುಖಂಡರು ಸೇರಿಕೊಂಡು ಈ ಕಾರ್ಯಕ್ರಮ ಮಾಡ ಬೇಕೆಂದ ರೇಣುಕಾಚಾರ್ಯ ಎರಡು ಪಂಚಾಯಿತಿಗಳಿಂದ ಮನೆ ಬಾಗಿಲಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಈ ವೇಳೆ ತಹಶೀಲ್ದಾರ್ ರಶ್ಮಿ, ಇಓ ರಾಮಬೋವಿ, ಲೋಕೋಪಯೋಗಿ ಇಲಾಖೆ ಎಇಇ ಗಂಗಪ್ಪ ಸೇರಿದಂತೆ ಹಿರೇಗೋಣಿಗೆರೆ ಹಾಗೂ ಬೇಲಿಮಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಗ್ರಾಮದ ಮುಖಂಡರು ವಿವಿಧ ಇಲಾಖೆ ಅಧಿಕಾರಿಗಳಿದ್ದರು.
ಯಾವುದೇ ಹಳ್ಳಿಗೆ ಮನೆ,ರಸ್ತೆ,ಶಾಲಾಕೊಠಡಿ ಸೇರಿದಂತೆ ಈಗಾಗಲೇ ಸಾಕಷ್ಟು ಅನುದಾನವನ್ನು ತಂದು ಅವಳಿ ತಾಲೂಕನ್ನು ಅಭಿವೃದ್ದಿ ಮಾಡಿದ್ದೇನೆ.
ಡ್ರೈನೇಜ್ ನಿರ್ಮಾಣ ಮಾಡಲು ಈಗಾಗಲೇ ಸಂಬಂಧ ಪಟ್ಟ ಸಚಿವರೊಂದಿಗೆ ಮಾತನಾಡಿದ್ದು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದರು.
ಯಡಿಯೂರಪ್ಪನವರು ಸಿಎಂ ಆಗಿದ್ದಾಗ 25 ಸಾವಿರಕ್ಕೂ ಹೆಚ್ಚು ಜನರಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಿದ್ದೇವೆ.