ನ್ಯಾಮತಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಇದೇ ತಿಂಗಳ 21 ರಂದು ಬೆಳಗುತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗುತ್ತಿ ಗ್ರಾಮದಲ್ಲಿ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಪೂರ್ವಬಾವಿ ಸಭೆ ನಡೆಸಿ ಅವರು ಮಾತನಾಡಿದರು.
ಈ ಭಾರೀ ಯರಗನಾಳ್,ಗುಡ್ಡೇಹಳ್ಳಿ ಹಾಗೂ ಬೆಳಗುತ್ತಿ ಈ ಮೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಗುತ್ತಿ ಗ್ರಾಮದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡುವಂತೆ ಮನವಿ ಮಾಡಿದರು.
ತಾಲೂಕು ಆಡಳಿತ ಜನರ ಮನೆ ಬಾಗಿಲಿಗೆ ಬರ ಬೇಕೆಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಧಿಕಾರಿಗಳು ಜನರ ಮನೆ ಬಾಗಿಲಿಗೆ ತೆರಳಿ ಜನರ ಸಮಸ್ಯೆಗಳನ್ನು ಹಾಲಿಸಿ ಅವರಿಗೆ ಅರ್ಹರಿಗೆ ಸರ್ಕಾರದ ಸವಲತ್ತು ಸಿಗುವಂತೆ ಮಾಡ ಬೇಕೆಂದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮೂಲಕ ನೂರಕ್ಕೆ ಎಪ್ಪತ್ತರಷ್ಟಾದರೂ ಸಮಸ್ಯೆಯನ್ನು ಅಧಿಕಾರಿಗಳು ಬಗೆ ಹರಿಸುವ ಕೆಲಸವನ್ನು ಮಾಡ ಬೇಕೆಂದರು.
ಜನರು ತಮ್ಮ ಕೆಲಸಗಳಿಗಾಗೀ ಕಚೇರಿಗಳನ್ನು ಅಲೆಯ ಬೇಕಾಗಿತ್ತು, ಆದರೇ ಇದೀಗ ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ಬಂದು ಜನರ ಸಮಸ್ಯೆಯನ್ನು ಹಾಲಿಸುವುದರ ಜೊತೆಗೆ ಸ್ಥಳದಲ್ಲೇ ಪರಿಹಾರ ಕಂಡು ಕೊಳ್ಳುವ ಕೆಲಸ ಮಾಡುತ್ತಿದ್ದಾರೆಂದರು.
ಮದ್ಯವರ್ತಿಗಳ ಹಾವಳಿಯಿಂದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ತಲುಪುವುದು ತಡವಾಗುತ್ತಿತ್ತು. ಆದರೇ ಈ ಕಾರ್ಯಕ್ರಮದಿಂದ ಮದ್ಯವರ್ತಿಗಳ ಹಾವಳಿ ತಪ್ಪಿದಂತಾಗಿದೆ ಎಂದರು.
ಈ ಸಂದರ್ಭ ತಹಶೀಲ್ದಾರ್ ತನುಜಾ ಟಿ ಸವದತ್ತಿ, ಉಪ ತಹಶೀಲ್ದಾರ್ ನಾಗರಾಜ್, ಇಓ ರಾಮಬೋವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು, ಉಪಾದ್ಯಕ್ಷರು ಸದಸ್ಯರು ಸೇರಿದಂತೆ ಗ್ರಾಮದ ಮುಖಂಡರಿದ್ದರು.

Leave a Reply

Your email address will not be published. Required fields are marked *