ಹುಣಸಘಟ್ಟ : ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗುರುವಾರ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಚ್ ಧನಂಜಯ ಹಾಗೂ ಉಪಾಧ್ಯಕ್ಷರಾಗಿ ಸುಮಿತ್ರಮ್ಮ ಅವಿರೋಧವಾಗಿ ಆಯ್ಕೆಗೊಂಡರು.
ಈ ಹಿಂದೆ ಎಚ್ಆರ್ ಹಾಲೇಶ್ ಅಧ್ಯಕ್ಷರಾಗಿ, ಬಸಮ್ಮ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ತೆರವುಗೊಂಡ ಅಧ್ಯಕ್ಷ ಸ್ಥಾನಕ್ಕೆ ಎಚ್ ಧನಂಜಯ ಸೇರಿದಂತೆ ಮೂರು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಸುಮಿತ್ರಮ್ಮ ನವರ ಒಂದು ನಾಮಪತ್ರ ಸಲ್ಲಿಕೆ ಯಾಗಿತ್ತು. ಕೊನೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಕೆಯಾದ ಮೂರು ನಾಮಪತ್ರಗಳಲ್ಲಿ 2 ನಾಮಪತ್ರಗಳು ವಾಪಸ್ ಪಡೆದಿದ್ದರಿಂದ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಎಂಸಿ ಮಂಜುನಾಥ್ ರವರು ಎಚ್ ಧನಂಜಯ್ ಅವರನ್ನು ಕೃಷಿ ಪತ್ತಿನ ಸಂಘದ ಅಧ್ಯಕ್ಷರನ್ನಾಗಿ ಸುಮಿತ್ರಮ್ಮ ನವರನ್ನು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಯಲ್ಲಿ ಕಾರ್ಯನಿರ್ವಣಾಧಿಕಾರಿ ಎಂ ಬಸವರಾಜ್, ಸಂಘದ ನಿರ್ದೇಶಕರಾದ ಮಹೇಶ್ವರಪ್ಪ, ಡಿಪಿ ಮಂಜುನಾಥ, ಹಾಲೇಶ್, ಸೂರ್ಯನಾರಾಯಣ, ವಿ ಮಂಜುನಾಥ ಯಾನೆ, ಎಂಜಿ ಹಾಲಪ್ಪ, ಎಕೆ ರುದ್ರಪ್ಪ, ಬಸಮ್ಮ , ರೇಣುಕಮ್ಮ ಉಪಸ್ಥಿತರಿದ್ದು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಫೋಟೋ ಸುದ್ಧಿ1: ಹೊಸಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನವಾಗಿ ಅವಿರೋಧವಾಗಿ ಆಯ್ಕೆಗೊಂಡ ಅಧ್ಯಕ್ಷರು ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು ಅಭಿನಂದಿಸಿದರು.