ಸಾಸ್ವೇಹಳ್ಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಭಿವೃದ್ದಿಗೆ ಎಂದೂ ಕೊನೆ ಇಲ್ಲಾ, ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಕೆಲಸಗಳು ನಿರಂತವಾಗಿ ನಡೆಯುತ್ತಲೇ ಇರುತ್ತೇವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ 4.20 ಕೋಟಿ ರೂಪಾಯಿಗೂ ಹೆಚ್ಚು ಅನುದಾನದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಒಂದು ಸಾವಿರ ಕೋಟಿಗೂ ಅಧಿಕ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದ್ದು ಅವಳಿ ತಾಲೂಕನ್ನು ಸುಂದರ ನಗರವನ್ನಾಗಿ ಕಾಣುವಂತೆ ಮಾಡಲು ಪಣ ತೊಟ್ಟಿದ್ದೇನೆ ಎಂದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗೂ ಅನುದಾನ ಹಾಕುವ ಮೂಲಕ ಅವುಗಳನ್ನು ಅಭಿವೃದ್ದಿ ಮಾಡಲಾಗಿದ್ದು, ಅಭಿವೃದ್ದಿಯೇ ನನ್ನ ಮೂಲ ಮಂತ್ರ ಎಂದರು.
ಅವಳಿ ತಾಲೂಕನ್ನು ದೂಳು ಮುಕ್ತ ತಾಲೂಕುಗಳನ್ನಾಗಿ ಮಾಡ ಬೇಕೆಂದು ಪಣ ತೊಟ್ಟಿದ್ದೇನೆ ಎಂದ ಶಾಸಕರು, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕನ್ನು ಎಲ್ಲರೂ ಒಮ್ಮೆ ತಿರುಗಿನೋಡುವಂತೆ ಅಭಿವೃದ್ದಿ ಮಾಡುತ್ತೇನೆ ಎಂದರು.
ರಸ್ತೆ ಅಭಿವೃದ್ದಿಗೆ ಹತ್ತು ಕೋಟಿ : ಕುಳಗಟ್ಟೆ ಗ್ರಾಮದಿಂದ ನಲ್ಲೂರಿಗೆ ತೆರಳುವ ರಸ್ತೆ ಅಭಿವೃದ್ದಿ ಕಾಮಗಾರಿಗೆ ಹತ್ತು ಕೋಟಿ ಅನುದಾನ ಬಿಡುಗಡೆ ಎಂದು ರೇಣುಕಾಚಾರ್ಯ ತಿಳಿಸಿದರು. ಕುಳಗಟ್ಟೆಯಿಂದ ಹೊನ್ನಾಳಿ ಗಡಿವರೆಗ ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆಯಾಗಿದ್ದು ಸದ್ಯದರಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ವಿವಿಧ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ : ತಾಲೂಕಿನ ಕುಳಗಟ್ಟೆ ಗ್ರಾಮದಲ್ಲಿ 55 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಯನ್ನು ಉದ್ಘಾಟಿಸಿದ ಶಾಸಕರು 75 ಲಕ್ಷ ರೂಪಾಯಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬೈರನಹಳ್ಳಿ ಗ್ರಾಮದಲ್ಲಿ 30.20 ಲಕ್ಷ ರೂಪಾಯಿ ವೆಚ್ಚದ ಸಿಸಿ ರಸ್ತೆ ಹಾಗೂ 35 ಲಕ್ಷ ರೂಪಾಯಿ ವೆಚ್ಚದ ಡಾಂಬರ್ ರಸ್ತೆಯನ್ನ ಶಾಸಕರು ಉದ್ಘಾಟಿಸಿದರು.ತ್ಯಾಗದಕಟ್ಟೆ ಗ್ರಾಮದಲ್ಲಿ 30 ಲಕ್ಷ ರೂಪಾಯಿ ಮೌಲ್ಯದ ಸಿಸಿ ರಸ್ತೆ ಉದ್ಘಾಟಿಸಿದ ಶಾಸಕರು, 10.50 ಲಕ್ಷ ಮೌಲ್ಯದಲ್ಲಿ ನಿರ್ಮಿಸಿದ ನೂತನ ಶಾಲಾ ಕೊಠಡಿಯನ್ನು ಉದ್ಘಾಟಿಸಿದರು. ಲಿಂಗಾಪುರ ಗ್ರಾಮದಲ್ಲಿ 30 ಲಕ್ಷ ರೂಪಾಯಿ ವೆಚ್ಚದ ಸಿಸಿ ರಸ್ತೆ ಉದ್ಘಾಟಿಸಿದ ಶಾಸಕರು 90 ಲಕ್ಷ ರೂಪಾಯಿ ವೆಚ್ಚದಲ್ಲಿ ಲಿಂಗಾಪುರದಿಂದ ಹನಗವಾಡಿ ಕೂಡು ರಸ್ತೆ ಕಾಮಗಾರಿಯನ್ನು ಉದ್ಘಾಟಿಸಿದರು.ಹನಗವಾಡಿ ಗ್ರಾಮದಲ್ಲಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಯನ್ನು ಉದ್ಘಾಟಿಸಿದ ಶಾಸಕರು, 10.50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಕೊಠಡಿಯನ್ನು ಉದ್ಘಾಟಿಸಿದರು ಇನ್ನ ಐನೂರು ಗ್ರಾಮದಲ್ಲಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ವಾಕ್ಸ್ ಚರಂಡಿ ನಿರ್ಮಾಣ ಮಾಡಿದ್ದು ಶಾಸಕರು ಉದ್ಘಾಟಿಸಿದರು. ಒಟ್ಟು 4.20 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಕಾಮಗಾರಿಗಳನ್ನು ಶಾಸಕರು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಲ್.ರಂಗನಾಥ್, ಗ್ರಾ.ಪಂ ಅಧ್ಯಕ್ಷರಾದ ಚಂದ್ರಪ್ಪ, ಉಪಾಧ್ಯಕ್ಷರಾದ ಹನುಮಮ್ಮ ಮಂಜಪ್ಪ, ಸದಸ್ಯರಾದ ಶ್ರೀಮತಿ ಮುದ್ದಪ್ಪ, ರಮೇಶ್,ಹನುಮಂತಪ್ಪ,ಬಂಪರ್ಹಾಲೇಶಪ್ಪ,ಗೀತಾಮಲ್ಲೇಶಪ್ಪ, ಬಗರ್ ಹುಕ್ಕುಂ ಕಮಿಟಿ ಸದಸ್ಯ ಎಂ.ಆರ್.ಮಂಹತೇಶ್,ಎಟಿಎಂ ಬಸವರಾಜ್, ಕೆ.ಬಿ.ಕರಿಬಸಪ್ಪ,ಸಿಸಿ ಮಂಜುನಾಥ್,ಚೀಲೂರು ರುದ್ರಪ್ಪ ಸೇರಿದಂತೆ ಮತ್ತಿತರರಿದ್ದರು.