ಬೆಂಗಳೂರು : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಅಕಾಲಿಕವಾಗಿ ಸುರಿದ ಬಾರೀ ಮಳೆಯಿಂದಾಗಿ ಸಾಕಷ್ಟು ಹಾನಿ ಉಂಟಾಗಿದ್ದು ಅವಳಿ ತಾಲೂಕನ್ನು ಅತಿವೃಷ್ಟಿ ಪೀಡಿತ ತಾಲೂಕು ಎಂದು ಘೋಷಣೆ ಮಾಡಿ, ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿರುವ ಕಂದಾಯ ಸಚಿವ ಆರ್.ಅಶೋಕ್ ಅವರ ಕಚೇರಿಯಲ್ಲಿ ಅವರನ್ನು ಭೇಟಿ ಮಾಡಿದ ಮನವಿ ಸಲ್ಲಿಸಿ ಮಾತನಾಡಿದ ರೇಣುಕಾಚಾರ್ಯ, ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ವಾಡಿಕೆ ಮಳೆ ಶೇ.88 ಮಿಮಿ, ಆದರೇ ಶೇ.335 ಮಿಮಿ ಮಳೆಯಾಗಿದ್ದು, ವಾಡಿಕೆಗಿಂತ ಶೇ288 ಮಿಮಿ ನಷ್ಟು ಹೆಚ್ಚು ಮಳೆಯಾಗಿದೆ ಎಂದರು.
ಮಳೆಯಿಂದಾಗಿ 2343.85 ಎಕರೆ ಭತ್ತ,163.37 ಎಕರೆ ಮೆಕ್ಕೆಜೋಳ,47,5 ಎಕರೆ ಶೇಂಗಾ, 23.5 ಎಕರೆ ಹತ್ತಿ,18.25 ಎಕರೆ ಸೋಯಾಬಿನ, 26.75 ಎಕರೆ ರಾಗಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದೆ ಅಷ್ಟೇ ಅಲ್ಲದೇ 150 ಕ್ಕೂ ಹೆಚ್ಚು ಮನೆಗಳು, 90 ಕ್ಕೂ ಹೆಚ್ಚು ಶಾಲಾ ಕೊಠಡಿಗಳು, 15 ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಹಾನಿಯಾಗಿದೆ ಎಂದರು.
ಮಳೆಯಿಂದಾಗಿ ಕೆರೆಗಳು ಕೋಡಿ ಬಿದ್ದು, ಹಾಳಾದರೆ, ರಸ್ತೆಗಳು, ಚೆಕ್ ಡ್ಯಾಂಗಳು, ಸೇತುವೆಗಳಿಗೂ ಹಾನಿಯಾಗಿದ್ದು, ಜನರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದರು.
ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ಹಾನಿಯಾಗಿದ್ದು ಮೂರು ದಿನಗಳ ಕಾಲ ಅವಳಿ ತಾಲೂಕಿನಾಧ್ಯಂತ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಕಷ್ಟ ಹಾಲಿಸುವುದರ ಜೊತೆಗೆ ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಬರವಸೆ ನೀಡಿರುವುದಾಗಿ ತಿಳಿಸಿದರು.
ಅಕಾಲಿಕ ಮಳೆಯಿಂದ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಸಾಕಷ್ಟು ಹಾನಿಯಾಗಿದ್ದು ಅವಳಿ ತಾಲೂಕನ್ನು ಅತಿವೃಷ್ಟಿ ಪೀಡಿತ ತಾಲೂಕು ಎಂದು ಘೋಷಣೆ ಮಾಡಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕಂದಾಯ ಸಚಿವರಿಗೆ ಮನವಿ ಮಾಡಿದ್ದು ಕಂದಾಯ ಸಚಿವರು ಸೂಕ್ತ ಪರಿಹಾರ ಬಿಡುಗಡೆ ಮಾಡುವ ಬರವಸೆ ನೀಡಿದ್ದಾರೆ ಎಂದರು.