ದಾವಣಗೆರೆ: ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀಮತಿ ಪುಷ್ಪ ಅಮರನಾಥ್ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮೇ.31ರ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಾಳೆ ಮದ್ಯಾಹ್ನ 2-30 ಗಂಟೆಗೆ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ಹೊಸ ಗಡಿಯಾರ ಕಂಬ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಂತರ ಕಾಂಗ್ರೆಸ್ ಕಛೇರಿಯಲ್ಲಿ ಸಭೆ ನಡೆಸುವರು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್ ಮತ್ತು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್‍ಎಸ್‍ಯುಐ, ಸೇವಾದಳ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಓಬಿಸಿ, ಕಿಸಾನ್, ಅಲ್ಪಸಂಖ್ಯಾತರ ವಿಭಾಗ, ವೈದ್ಯಕೀಯ, ವಕೀಲರ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ವಿಕಲಚೇತನರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು, ಎಪಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಭಾಗವಹಿಸಬೇಕೆಂದು ಕೋರಿದ್ದಾರೆ.