ನ್ಯಾಮತಿ : ಸರ್ಕಾರದಿಂದ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳು ಸಿಗುತ್ತಿದ್ದು, ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿವಿ ಮಾತು ಹೇಳಿದರು.
ಪಟ್ಟಣದ ಮಂಹಾತೇಶ್ವರ ಕಲ್ಯಾಣ ಮಂದಿರದಲ್ಲಿ ಕಟ್ಟಡ ಮತ್ತು ಇತರೆ ಕಾರ್ಮಿಕ ಮಂಡಳಿ, ದಾವಣಗೆರೆ ಆರೈಕೆ ಆಸ್ಪತ್ರೆವತಿಯಿಂದ ಆಯೋಜಿಸಿದ್ದ ನೋಂದಾಯಿತ ಕಟ್ಟಡ ಕಾರ್ಮಿಕರ ಉಚಿತ ಆರೋಗ್ಯ ತಪಾಸಣೆ ಶಿಬಿರದಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು, ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಮಿಕ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳನ್ನು ಕುಟುಂಬಗಳಿಗೆ ನೀರುವುದರ ಮೂಲಕ ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡ ಬೇಕು ಎಂದರು.
ಈಗಾಗಲೇ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ13,169 ಜನ ನೊಂದಾಯಿತ ಕಟ್ಟಡ ಕಾರ್ಮಿಕರಿದ್ದು ಅದರಲ್ಲಿ ಐದು ಸಾವಿರಕ್ಕೂ ಹೆಚ್ಚು ನೋಂದಾಯಿತ ಕಟ್ಟಡ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದು ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಿವಿ ಮಾತು ಹೇಳಿದರು.
ಕಾರ್ಮಿಕರಿಗೆ ಆರೋಗ್ಯ ಎಂಬುದು ಅತ್ಯಂತ ಮುಖ್ಯವಾಗಿದ್ದು ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಒತ್ತು ನೀಡುವ ದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದರು.
ನಮ್ಮ ಸರ್ಕಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಕ್ಕೆ ಬದ್ದವಾಗಿದ್ದು, ನೋಂದಾಯಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ,ದುರ್ಬಲತೆಯ ಪಿಂಚಣಿ,ಟೂಲ್‍ಕಿಟ್ ಸೌಲಭ್ಯ,ವಸತಿ ಸೌಲಭ್ಯ,ಹೆರಿಗೆ ಸೌಲಭ್ಯ,ಶಿಶುಪಾಲನ ಸೌಲಭ್ಯ,ಅಂತ್ಯಕ್ರಿಯೆ ವೆಚ್ಚ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.
ಇನ್ನು ಅರ್ಹಫಲಾನುವಿಗಳ ಇಬ್ಬರು ಮಕ್ಕಳ ವಿದ್ಯಾಬ್ಯಾಸಕ್ಕೂ ಸರ್ಕಾರ ಸೌಲಭ್ಯಗಳನ್ನ ನೀಡುತ್ತಿದ್ದು ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡು ಮಕ್ಕಳಿಗೆ ಉತ್ತರ ವಿದ್ಯಾಬ್ಯಾಸ ಕೊಡಿಸುವಂತೆ ಕಿವಿ ಮಾತು ಹೇಳಿದರು.
ಈ ಸಂದರ್ಭ ತಹಶೀಲ್ದಾರ್ ಎಂ.ರೇಣುಕಾ, ಪ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಕೊಟ್ರೇಶ್, ಪಿಎಸೈ ರಮೇಶ್, ಜಿಲ್ಲಾ ಕಾರ್ಮಿಕಾಧಿಕಾರಿ ಜಿ.ಇಬ್ರಾಯಿಂ, ಕಾರ್ಮಿಕ ನಿರೀಕ್ಷಕ ರಾಜಶೇಖರ್ ಹಿರೇಮಠ್ ಸೇರಿದಂತೆ ಮುಖಂಡರಾದ ನಟರಾಜ್, ಎಸ್.ಪಿ.ರವಿಕುಮಾರ್,ಗಿರೀಶ್ ಸೇರಿದಂತೆ ಮತ್ತೀತತರಿದ್ದರು.