ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ 54695 ಹೆಕ್ಟರ್ ಪ್ರದೇಶದಲ್ಲಿ
ಭತ್ತದ ಬೆಳೆಯ ಕ್ಷೇತ್ರ ಆವರಿಸಿದ್ದು, ಸಧ್ಯ ಭತ್ತದ
ಬೆಳೆಯು ಕಟಾವಿನ ಹಂತ ತಲುಪಿರುತ್ತದೆ. ಹಾಗೂ ಜಿಲ್ಲೆಯಲ್ಲಿ

ಭತ್ತದ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯ ಬಹುತೇಕ
ರೈತರು ಭತ್ತದ ಬೆಳೆಯನ್ನು ಕಟಾವು ಯಂತ್ರಗಳ
ಮೂಲಕ ಕಟಾವು ಮಾಡುತ್ತದ್ದು, ರೈತರು ತಮ್ಮ ಸಮೀಪದ
ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತ
ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದು.
ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ
ಅತಿಹೆಚ್ಚು ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಗಮನಕ್ಕೆ ಬಂದಿದ್ದು
ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಆದ್ದರಿಂದ ಭತ್ತ
ಕಟಾವು ಯಂತ್ರದ ಬಾಡಿಗೆ ದರವನ್ನು ಪರಿಷ್ಕರಿಸಲಾಗಿರುತ್ತದೆ.
ಅತಿವೃಷ್ಠಿ ಸಂಕಷ್ಟದ ಸಂದರ್ಭದಲ್ಲಿ ಬೆಲ್ಟ್/ಚೈನ್ ಟೈಪ್ ಭತ್ತ
ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ.2250/- ಹಾಗೂ ಟೈರ್
ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ.1800/-
ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ. ಖಾಸಗಿ ಭತ್ತ ಕಟಾವು
ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ
ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ದ ವಿಪತ್ತು
ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ
ಕೈಗೊಳ್ಳಲಾಗುವುದು. ಅತಿವೃಷ್ಠಿ ಸಂಕಷ್ಟದ ದಿನಗಳಲ್ಲಿ
ಸಹಕರಿಸಬೇಕು. ಭತ್ತ ಕಟಾವು ಯಂತ್ರದ ಮಾಲೀಕರು
ಹೆಚ್ಚಿನ ದರ ನಿಗದಿಪಡಿಸಿದ್ದಲ್ಲಿ ರೈತರು ಕಂದಾಯ/ಕೃಷಿ ಇಲಾಖೆಯ
ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳು ಹಾಗೂ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಮಹಾಂತೇಶ
ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *