ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ದಾವಣಗೆರೆಯ ಉತ್ಸಾಹಿ ಯುವ ಮುಖಂಡರಾದ ಸೈಯದ್ ಖಾಲಿದ್ ಅಹ್ಮದ್ ಆಯ್ಕೆಯಾಗಿದ್ದಾರೆ.
ದಾವಣಗೆರೆ ಜಿಲ್ಲಾ ಅಧ್ಯಕ್ಷರಾಗಿ ನಂತರ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ತಮ್ಮ ಅತಿ ಹೆಚ್ಚು ಸಮಯ ಪಕ್ಷಕ್ಕಾಗಿ ಮಿಸಲಿಟ್ಟು,ಪಕ್ಷಕ್ಕಾಗಿ ಹಗಲು ರಾತ್ರಿ ಕಷ್ಟ ಪಟ್ಟು ದುಡಿದಿದ್ದಾರೆ ಅದರ ಫಲವಾಗಿ ಮಾನ್ಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ ರವರು ಅವರ ಕಾರ್ಯವನ್ನು ಗುರುತಿಸಿ ಇಂದು ಅತ್ಯನ್ನತ ಹುದ್ದೆಯನ್ನು ಘೋಷಿಸಿದ್ದಾರೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಸಂತಸ
ವ್ಯಕ್ತ ಪಡಿಸಿದ್ದಾರೆ.
ಸೈಯದ್ ಖಾಲಿದ್ ಅಹ್ಮದ್ ಅವರಿಗೆ ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ನವರು ಹಾಗೂ ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರು ಅಭಿನಂದಿಸಿದ್ದಾರೆ.ದಾವಣಗೆರೆ ಹೆಸರನ್ನು ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯಲಿ ನಿವು ರಾಜಕೀಯದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.