ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಎಂಬುದು ಮರೀಚಿಕೆಯಲ್ಲಾ, ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ಅವಳಿ ತಾಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿ ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುತ್ತಿದ್ದು, ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ದಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ ಎಂದ ಶಾಸಕರು, ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಕೆಲಸಗಳಿಗೆ ಎಂದೂ ಬರ ಇಲ್ಲಾ ಎಂದರು.
ಈಗಾಗಲೇ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಕೆರೆಗಳನ್ನು ತುಂಬಿಸುವ 518 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದ್ದು ಆದಷ್ಟು ಬೇಗ ಅವಳಿ ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸಲಾಗುವುದು ಎಂದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಪ್ರತಿಯೊಂದು ಮನೆಗೆ ಶುದ್ದ ಕುಡಿಯುವ ನೀರು ನೀಡ ಬೇಕೆಂಬ ಉದ್ದೇಶದಿಂದ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಮಾಡಿಸಲಾಗುತ್ತಿದ್ದು ಅವಳಿ ತಾಲೂಕಿನಲ್ಲಿ 181 ಗ್ರಾಮಗಳಲ್ಲಿ ಜಲಜೀವನ್ ಮೀಷನ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು. ಈಗಾಗಲೇ 38 ಗ್ರಾಮಗಳಲ್ಲಿ ಜಲಜೀವನ್ ಮೀಷನ್ ಕಾಮಗಾರಿ ಪೂರ್ಣಗೊಂಡಿದ್ದು 44 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದ ಶಾಸಕರು, 22 ಕಾಮಗಾರಿಗಳಿಗೆ ಟೆಂಡರ್ ಕರೆದಿದ್ದು ಇನ್ನು 77 ಕಾಮಗಾರಿಗಳಿಗೆ ಎಸ್ಟಿಮೇಷನ್ ಮಾಡಿಸಲಾಗುತ್ತಿದೆ ಎಂದ ಶಾಸಕರು ಇನ್ನೊಂದು ವರ್ಷದ ಒಳಗಾಗೀ ಎಲ್ಲಾ ಗ್ರಾಮಗಳಿಗೆ ಜಲಜೀವನ್ ಮೀಷನ್ ಯೋಜನೆ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದರು.
ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ : ತಾಲೂಕಿನ ಹನುಮಸಾಗರ ಮೇಲಿನ ತಾಂಡದಲ್ಲಿ 17 ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಜೀವನ್ ಮೀಷನ್ ಕಾಮಗಾರಿಯನ್ನು ಉದ್ಘಾಟಿಸಿದ ಶಾಸಕರು,ಸೋಮನಮಲ್ಲಾಪುರ ಗ್ರಾಮದಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ರಿವಿಟ್ ಮೆಂಟ್ ಕಾಮಗಾರಿ ಉದ್ಘಾಟಿಸಿದರು.ದೇವನಾಯ್ಕನಹಳ್ಳಿ ಸಮೀಪದ ತುಂಗಭದ್ರಾ ನದಿಗೆ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಳೆಮಟ್ಟಿಲು ನಿರ್ಮಾಣ ಮಾಡಿದ್ದು ಅದನ್ನು ಉದ್ಘಾಟಿಸಿದ ಶಾಸಕರು,ಗೊಲ್ಲರಹಳ್ಳಿ ಗ್ರಾಮದಲ್ಲಿ 83 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿದ್ದು ಅದನ್ನು ಉದ್ಘಾಟಿಸಿದ ಶಾಸಕರು ಒಟ್ಟು 1.70 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿದರು.
ಈ ಸಂದರ್ಭ ಪುರಸಭೆ ಅಧ್ಯಕ್ಷರಾದ ರಂಗನಾಥ್, ಪುರಸಭೆ ಮಾಜಿ ಅಧ್ಯಕ್ಷರಾದ ಬಾಬು ಓಬಳದಾರ್,ಎಪಿಎಂಸಿ ನಿರ್ದೇಶಕ ಕುಬೇರಪ್ಪ,ಪುರಸಭೆ ನಾಮನಿರ್ದೇಶಿತ ಸದಸ್ಯ ಕಿಟ್ಟಿ ಮುರಾರಿ, ಓಬಿಸಿ ಮೋರ್ಚ ತಾಲೂಕು ಅಧ್ಯಕ್ಷ ರಾಕೇಶ್,ಮುಖಂಡರಾದ ಇಂಚರ ಮಂಜುನಾಥ್, ಸೇರಿದಂತೆ ಮತ್ತೀತರರಿದ್ದರು.