ದಾವಣಗೆರೆ ಜೂ.23
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಾರ್ಯ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ “ತಂಬಾಕು ಮುಕ್ತ ವಿಶ್ವವಿದ್ಯಾನಿಲಯ” ಘೋಷಣಾ ಕಾರ್ಯಕ್ರಮವನ್ನು ಜೂ.24 ರಂದು ಬೆ.11 ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಎಂ.ಬಿ.ಎ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳು (ಪ್ರಭಾರೆ) ಪ್ರೊ.ಲಕ್ಷ್ಮಣ.ಪಿ ವಹಿಸುವರು, ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧ್ಯಕ್ಷರಾದ ಮಹಾಂತೇಶ ಬೀಳಗಿ ನೆರವೇರಿಸುವರು.
ಗೌರವ ಉಪಸ್ಥಿತಿಯನ್ನು ಮಾನ್ಯ ಕುಲಸಚಿವರು ದಾವಣಗೆರೆ ವಿಶ್ವವಿದ್ಯಾನಿಲಯ (ಹಿರಿಯ ಶ್ರೇಣಿ) ಸರೋಜ ಬಿ.ಬಿ ವಹಿಸುವರು, ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ನೋಡಲ್ ಅಧಿಕಾರಿಯಾದ ಪಿ.ಎನ್.ಲೋಕೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ, ದಾವಣಗೆರೆ ವಿಶ್ವವಿದ್ಯಾನಿಲಯ ಸಮಾಜ ಕಾರ್ಯ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ಶಿವಲಿಂಗಪ್ಪ ಬಿ.ಪಿ ಪಾಲ್ಗೊಳ್ಳುವರು.
‘ಬಾಯಿ ಕ್ಯಾನ್ಸರ್ ಹಾಗೂ ತಂಬಾಕಿನ ದುಷ್ಪರಿಣಾಮಗಳು’ ಎಂಬ ವಿಷಯದ ಕುರಿತು ಸಿ.ಜಿ ಆಸ್ಪತ್ರೆ ದಂತ ವಿಭಾಗದ ಮುಖ್ಯಸ್ಥ ಡಾ.ತಿಪ್ಪೇಸ್ವಾಮಿ ಪಿ.ಎಂ ಇವರು ವಿಶೇಷ ಉಪನ್ಯಾಸ ನೀಡುವರು ಹಾಗೂ ಕಾರ್ಯಕ್ರಮದ ಕುರಿತು ಪ್ರಾಸ್ತವಿಕವಾಗಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್ ಮಾತನಾಡುವರು.