ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಚತುಸ್ಪಥ ರಸ್ತೆ ನಿರ್ಮಾಣದ ಜೊತೆಗೆ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಕೊಡತಾಳು-ಮಾದಾಪುರ ಗ್ರಾಮದ ಬಳಿ ಕೆರೆ ಏರಿಗೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಜೊತೆಗೆ ರಸ್ತೆ ಅಗಲೀಕರಣ ಕಾಮಗಾರಿಗೆ 4.50 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನನ್ನ ಮತ ಕ್ಷೇತ್ರದ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಸಾರ್ವಜನಿಕರ ಹಿತಾಸಕ್ತಿಯ ದೃಷ್ಟಿಯಿಂದ ಹಲವಾರು ರಸ್ತೆಗಳು ಕಿರಿದಾಗಿದ್ದು ವಾಹನಗಳ ಸುಗಮ ಸಂಚಾರಕ್ಕಾಗಿ ದ್ವಿಪತ ರಸ್ತೆಗಳನ್ನು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಸುಂದರವಾಗಿ ಚತುಸ್ಪಥ ರಸ್ತೆಗಳನ್ನಾಗಿ ಅಭಿವೃದ್ದಿ ಪಡಿಸಲಾಗುತ್ತಿದೆ ಎಂದರು.
ಅದೇ ರೀತಿ ಕೆರೆ ಏರಿ ಹಾಗೂ ತಿರುವು ರಸ್ತೆಗಳನ್ನು ಅಗಲೀಕರಣ ಮಾಡಿ ಕೆರೆ ಏರಿಗಳಿಗೆ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ ಎಂದರು. ಅಪಘಾತಗಳಿಗೆ ಕಡಿವಾಣ ಹಾಕ ಬೇಕೆಂಬ ಉದ್ದೇಶದಿಂದ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಗುತ್ತಿಗೆದಾರರು ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವಂತೆ ಕಿವಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ತಾಲೂಕಿನ ಅರಕೆರೆ ಎಕೆ ಕಾಲೋನಿಯಿಂದ ಮಾಸಡಿ ಗ್ರಾಮದವರೆಗೆ 4.75 ಕೋಟಿ ರೂಪಾಯಿ ವೆಚ್ಚದಲ್ಲಿ ಚತುಸ್ಪಥ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದ ಶಾಸಕರು, ಹೊನ್ನಾಳಿ ನಗರದ ಟಿಬಿ ವೃತ್ತದಿಂದ ದಿಡಗೂರು ಕೃಷ್ಟಪ್ಪ ನಗರದ ಡಾಬಾದವರೆಗೆ 7.50 ಕೋಟಿ ರೂಪಾಯಿ ವೆಚ್ಚದಲ್ಲಿ ಚತುಸ್ಪಥ ರಸ್ತೆ ನಿರ್ಮಾಣ ಕಾಮಗಾರಿಯ ಜೊತೆಗೆ ರಸ್ತೆ ವಿಭಜಕ ಹಾಗೂ ಅಲಂಕಾರಿಕ ದೀಪಗಳ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೇ ಎಂದರು.
ಕುಂದೂರು ಹೊರವಲಯದ ಬೈಪಾಸ್ ರಸ್ತೆ ಬಳಿ ರಸ್ತೆ ಅಗಲೀಕರಣ ಕಾಮಗಾರಿಯ ಜೊತೆಗೆ ತಡೆಗೋಡೆ ನಿರ್ಮಾಣ ಮಾಡಲು 6.50 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಆಯ್ದಗ್ರಾಮಗಳಲ್ಲಿ ಚತುಸ್ಪಥ ರಸ್ತೆ ಹಾಗೂ ಕೆರೆ ಏರಿಗಳ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೇ ಸಲ್ಲಿಸಿದ್ದು ಸಿಎಂ ಅವರು ಸಕಾರಾತ್ಮಕವಾಗಿ ಸ್ಪಂಧಿಸಿ ಕಾಮಗಾರಿಗಳಿಗೆ ಅನುದಾನ ನೀಡಲು ಸಮ್ಮತಿಸಿದ್ದಾರೆ ಎಂದರು.
ಈ ಸಂದರ್ಭ ಗ್ರಾ.ಪಂ.ಅಧ್ಯಕ್ಷರಾದ ಲಲಿತಮ್ಮ, ಉಪಾಧ್ಯಕ್ಷರಾಧ ಗಿರೀಶ್, ಸದಸ್ಯರಾಧ ನಾಗರಾಜ್ ಸೇರಿದಂತೆ ಮುಖಂಡರಾಧ ಮಲ್ಲೇಶಪ್ಪ, ತತ್ಯಾನಾಯ್ಕ,ರೇಣು,ರುದ್ರೇಶ್, ಮಂಜುಪಾಟೀಲ್, ಉಮೇಶ್ ನಾಯ್ಕ,ಮಂಜಪ್ಪ, ದಿನೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.