ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿದ್ದು, ಆಯಾ ಗ್ರಾಮಗಳ ಗ್ರಾಮಸ್ಥರು ಮುತುವರ್ಜಿವಯಿಸಿ, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.12 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಕೆಲಸಗಳಿಗೆ ಎಂದೂ ಕೊರತೆ ಇಲ್ಲಾ, ನಿರಂತವಾಗಿ ಅಭಿವೃದ್ದಿ ಕೆಲಸಗಳು ನಡೆಯುತ್ತಲೇ ಇರುತ್ತವೇ ಎಂದರು.
ಅವಳಿ ತಾಲೂಕಿನಲ್ಲಿ ಪ್ರಸ್ತುತ ಸಾವಿರಾರು ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃಧ್ದಿ ಕಾಮಗಾರಿಗಳು ಪ್ರಗತಿಯಲ್ಲಿವೇ ಎಂದ ಶಾಸಕರು, ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದು ಕೊಳ್ಳುವಂತೆ ಗ್ರಾಮಸ್ಥರು ಮುತುವರ್ಜಿವಯಿಸುವಂತೆ ಕರೆ ನೀಡಿದರು.
ಅವಳಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲೂ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದ್ದು ಎಲ್ಲಾ ಹಳ್ಳಿಗಳನ್ನು ಧೂಳು ಮುಕ್ತ ಗ್ರಾಮಗಳನ್ನಾಗಿ ಮಾಡಿದ್ದೇನೆ ಎಂದ ಶಾಸಕರು,ಅವಳಿ ತಾಲೂಕುಗಳನ್ನು ರಾಜ್ಯದಲ್ಲೇ ಮಾದರಿ ತಾಲೂಕು ಮಾಡ ಬೇಕೆಂಬ ಕನಸು ನನ್ನದು ಎಂದರು.
ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ : ತಾಲೂಕಿನ ಕೂಲಂಬಿ ಗ್ರಾಮದಲ್ಲಿ 70 ಲಕ್ಷ ರೂಪಾಯಿ ವೆಚ್ಚದಲ್ಲಿ ಮೆಟ್ಲಿಂಗ್ ರಸ್ತೆ ನಿರ್ಮಾಣ ಹಾಗೂ ಕೂಲಂಬಿ-ಕುಂದೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು-ಪ್ರೌಢಶಾಲೆಯ ದ್ವಾರಬಾಗಿಲು ನಿರ್ಮಾಣ 12 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕರು, ಮುಕ್ತೇನಹಳ್ಳಿ ಗ್ರಾಮದಲ್ಲಿ 30 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸೇರಿ ಒಟ್ಟು 1.12 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭ ಮುಖಂಡರಾದ ಸಿದ್ದಲಿಂಗಪ್ಪ,ನಟರಾಜ್,ನಿಂಗರಾಜು,ಮಲ್ಲಿಕಾರ್ಜುನ್,ಸಂತೋಷ್, ಅಜಯ್,ಪ್ರಕಾಶ್, ಶಿವಕುಮಾರ್,ನಾಗರಾಜ್,ಶ್ರೀನಿವಾಸ್,ಚಂದ್ರಪ್ಪ,ಮುರುಗೇಶಪ್ಪ,ನಾಗರಾಜ್, ಬಸಣ್ಣ ಸೇರಿದಂತೆ ಗ್ರಾಮಸ್ಥರು, ವಿವಿಧ ಇಲಾಖೆ ಅಧಿಕಾರಿಗಳಿದ್ದರು.