2022-23ನೇ ಸಾಲಿಗೆ ದಾವಣಗೆರೆ ಜಿಲ್ಲೆಯಲ್ಲಿ
ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ
ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಮೆಟ್ರಿಕ್
ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ
ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಜು.01 ರಿಂದ ಸೇವಾಸಿಂದು ವೆಬ್‍ಸೈಟ್
 hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ  ಅರ್ಜಿಗಳನ್ನು
ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆ
ಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಮುಸ್ಲಿಂ,
ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ 75% ಇತರೆ ಜನಾಂಗದ
ವಿದ್ಯಾರ್ಥಿಗಳಿಗೆ 25% ಇದ್ದು, ಆಸಕ್ತಿಯುಳ್ಳ ಹಾಗೂ ಅರ್ಹ
ಅಭ್ಯರ್ಥಿಗಳು ಆ.15 ರೊಳಗಾಗಿ ಸೇವಾಸಿಂಧು ತಂತ್ರಾಂಶದಲ್ಲಿ
ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ತಾಲ್ಲೂಕು
ವಿಸ್ತರಣಾಧಿಕಾರಿಗಳ ಕಛೇರಿ ದೂರವಾಣಿ :08192-250066 ಗಳನ್ನು
ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರಕಲ್ಯಾಣ ಇಲಾಖೆ, ಜಿಲ್ಲಾ

ಅಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *