ದಾವಣಗೆರೆ ಜು.08
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಜು.09 ರಂದು ಬೆ.11 ಕ್ಕೆ ಹೊನ್ನೂರು ವಡ್ಡರಹಟ್ಟಿ ಗ್ರಾಮದಲ್ಲಿ ಅರಣ್ಯ, ಕಂದಾಯ, ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸುವರು. ಮ.02ಕ್ಕೆ ಹೊನ್ನೂರು ವಡ್ಡರಹಟ್ಟಿ ಗ್ರಾಮದಲ್ಲಿ ಸರ್ಕಾರಿ ಶಾಲೆಗೆ ಪೀಠೋಪಕರಣ ವಿತರಣೆ ಮತ್ತು ಶೌಚಾಲಯ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸುವರು. ಸ.04ಕ್ಕೆ ಹೊನ್ನೂರು ವಡ್ಡರಹಟ್ಟಿ ತಾಂಡಾದಲ್ಲಿ ಸರ್ಕಾರಿ ಶಾಲೆಗೆ ಪೀಠೋಪಕರಣ ವಿತರಣೆ ಮತ್ತು ಶೌಚಾಲಯ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸುವುದು.
ಜು.10 ರಂದು ಮ.01ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಜು.11 ರಂದು ಬೆ.11 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸುವರು. ಮ.12ಕ್ಕೆ ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಕಮಾನು ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸುವರು. ಮ.12.15ಕ್ಕೆ ಬೇಲಿಮಲ್ಲೂರು ಗ್ರಾಮದಲ್ಲಿ ಸರ್ಕಾರಿ ಶಾಲೆಯ ಅಡುಗೆ ಕೋಣೆ ಮತ್ತು ಗ್ರಾಮ ಪಂಚಾಯತಿ ಕಛೇರಿ ಕಾಂಪೌಂಡ್ ಕಾಮಗಾರಿ ಶಂಕುಸ್ಥಾಪನೆ ಮತ್ತು ಪಶುವೈದ್ಯ ಆಸ್ಪತ್ರೆ ಉದ್ಘಾಟನೆ ನೆರವೇರಿಸುವರು. ಮ.01ಕ್ಕೆ ಹಿರೇಗೋಣಿಗೆರೆ ಗ್ರಾಮದಲ್ಲಿ ಸರ್ಕಾರಿ ಶಾಲೆಗೆ ಪೀಠೋಪಕರಣ ವಿತರಣೆ ಮತ್ತು ಜಲಜೀವನ್ ಮಿಷನ್ ಕಾಮಗಾರಿ ಉದ್ಘಾಟನೆ ನೆರವೇರಿಸುವರು. ಮ.1.30ಕ್ಕೆ ಹರಗನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಶಂಕುಸ್ಥಾಪನೆ ಮತ್ತು ಜಲಜೀವನ್ ಮಿಷನ್ ಕಾಮಗಾರಿ ಉದ್ಘಾಟನೆ ನೆರವೇರಿಸುವುದು. ಮ.02ಕ್ಕೆ ಕೋಣನತಲೆ ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿ, ಸಿ.ಸಿ.ಕಾಲುವೆ ಮತ್ತು ಹೈಮಾಸ್ಟ್ ದೀಪ ಉದ್ಘಾಟನೆ ನೆರವೇರಿಸುವರು.
ಜು.12 ರಂದು ನ್ಯಾಮತಿ ತಾಲ್ಲೂಕಿನ ಕುಂಕೋವಾ ಮತ್ತು ಹೊನ್ನಾಳಿ ತಾಲ್ಲೂಕಿನ ಕಮ್ಮಾರಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆಯೋಜನೆ ಬಗ್ಗೆ ಪೂರ್ವಭಾವಿ ಸಭೆ ನಡೆಸುವುದು.
ಜು.13 ರಂದು ಬೆ.11ಕ್ಕೆ ಹೊನ್ನಾಳಿ ಪಟ್ಟಣದ ತಾಲ್ಲೂಕು ಪಂಚಾಯತಿ ಸಾಮಥ್ರ್ಯಸೌಧದಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಸಂ.4.30ಕ್ಕೆ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವರು.
ಜು.14 ರಂದು ಹೊನ್ನಾಳಿ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವರು.
ಜು.15 ರಂದು ಬೆ.11ಕ್ಕೆ ದಾವಣಗೆರೆಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ.05ಕ್ಕೆ ಹೊನ್ನಾಳಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವುದು.
ಜು.16 ರಂದು ಮ.01ಕ್ಕೆ ನ್ಯಾಮತಿ ಪಟ್ಟಣದ ಶಿವಾನಂದಪ್ಪ ಬಡಾವಣೆಯ ವಾಸಿಗಳ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವರು. ಮ.03ಕ್ಕೆ ನ್ಯಾಮತಿ ಪಟ್ಟಣ ಪಂಚಾಯತಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ಸ.06ಕ್ಕೆ ಕುಂಕೋವಾ ಗ್ರಾಮದಲ್ಲಿ ನ್ಯಾಮತಿ ಪಟ್ಟಣದ ಪದವಿ ಕಾಲೇಜಿನಿಂದ ಆಯೋಜಿಸಿರುವ ಎನ್.ಎಸ್.ಎಸ್. ಕ್ಯಾಂಪ್ ಉದ್ಘಾಟನೆ ನೆರವೇರಿಸುವರು.
ಜು.17 ರಂದು ಬೆ10.30 ಕ್ಕೆ ಹೊನ್ನಾಳಿ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವರು ನಂತರ ಅದೇ ದಿನ ರಾತ್ರಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.