ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಸೌಲಭ್ಯ ಪಡೆಯಲು ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18 ರಿಂದ 60 ವಯೋಮಿತಿಯ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದು. ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಪಶುಪಾಲನಾ ಇಲಾಖೆಯ ಆಯಾ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆ ಇವರಿಂದ ಪಡೆದು, ಆಗಸ್ಟ್
05 ರೊಳಗಾಗಿ ನಿಗದಿತ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರನ್ನು ಸಂರ್ಪಕಿಸಬಹುದೆಂದು ಪ್ರಕಟಣೆ ತಿಳಿಸಿದೆ.