ದಾವಣಗೆರೆ ಜು.16
‘ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ’ ಕುರಿತ ಸಂವಾದ ಕಾರ್ಯಕ್ರಮ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆಯಲಿದೆ.
ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಇವರ ಉಪಸ್ಥಿತಿಯಲ್ಲಿ ಜುಲೈ 19 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ರವರಗೆ ಜರಗುವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *