ದಾವಣಗೆರೆ ಜಿಲ್ಲಾಧಿಕಾರಿಗಳಾಗಿ ಸುಮಾರು 3 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚಿಗೆ ವರ್ಗಾವಣೆಗೊಂಡ ಮಹಾಂತೇಶ ಬೀಳಗಿಯವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಜುಲೈ 20 ರ ಮಂಗಳವಾರ ಸಂಜೆ 5 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಕಾರ್ಯನಿರ್ವಹಿಸಿದ ಅಧಿಕಾರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದೇ ವೇಳೆ ನೂತನ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ವಹಿಸಿಕೊಂಡಿರುವ ಶಿವಾನಂದ ಕಾಪಶಿ ಅವರಿಗೂ ಸ್ವಾಗತ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು, ನೌಕರರ ಸಂಘದ ಪ್ರತಿನಿಧಿಗಳು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಿವೃತ್ತ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಲೋಕೇಶ್ ಪಿ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.