ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಪರಿಸರ ಸಂರಕ್ಷಣಾ” ದಿನದ ಅಂಗವಾಗಿ ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ” ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಜು.28 ರಂದು ದಾವಣಗೆರೆ ಮಹಿಳಾ ಸೇವಾ ಸಮಾಜ ಪ್ರೌಢಶಾಲೆ ಇಲ್ಲಿ ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *