ಕರ್ನಾಟಕ ಮಹರ್ಷಿ ವಾಲ್ಮೀಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನ ವಿವಿಧ ಯೋಜನೆಗಳಡಿ ಪರಿಶಿಷ್ಟ ಪಂಗಡದವರು ಹಾಗೂ ಅಎಣ್ಯ ಆಧಾರಿತ ಆಧಿವಾಸಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯ ಜನಾಂಗದ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್.20 ಆಗಿರುತ್ತದೆ.
*ಯೋಜನೆಗಳು: ನೇರಸಾಲ ಯೋಜನೆ-ಘಟಕವೆಚ್ಚ ರೂ.1ಲಕ್ಷ ಇದರಲ್ಲಿ ಶೇ.50ರಷ್ಟು ನಿಗಮದಿಂದ ಸಾಲ ಮತ್ತು ಶೇ.50 ಸಹಾಯಧನ ನೀಡಲಾಗುವುದು.
*ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-ಇ.ವಿ. ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ (ಇ-ಕಾಮರ್ಸ್‍ನಡಿಯಲ್ಲಿ ಕಂಪನಿಗಳಿಂದ ಗ್ರಾಹಕರಿಗೆ ಸರಕು ತಲುಪಿಸಲು) ಗರಿಷ್ಟ ರೂ.50 ಸಾವಿರ ಸಹಾಯಧನ, ಉಳಿದ ಮೊತ್ತ ಬ್ಯಾಂಕ್‍ನÀ ಸಾಲವಾಗಿರುತ್ತದೆ, ಐ.ಎಸ್.ಬಿ ಹಾಗೂ ಇತರೆ ಚಟುವಟಿಕೆಗಳಿಗಾಗಿ ಸಹಾಯಧನವಾಗಿ ಗರಿಷ್ಟ ರೂ.2 ಲಕ್ಷ, ಉಳಿದ ಮೊತ್ತ ಬ್ಯಾಂಕ್‍ನÀ ಸಾಲವಾಗಿರುತ್ತದೆ, ಸರಕು ಸಾಗಾಣಿಕೆ ವಾಹನ: ಗರಿಷ್ಟ ರೂ.3.50ಲಕ್ಷ, ಉಳಿದ ಮೊತ್ತ ಬ್ಯಾಂಕ್‍ನÀ ಸಾಲವಾಗಿರುತ್ತದೆ.
*ಮೈಕ್ರೋ ಕ್ರೆಡಿಟ್ ಯೋಜನೆ: ಕನಿಷ್ಟ 10 ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ಗರಿಷ್ಟ ರೂ.2.50ಲಕ್ಷ, ಇದರಲ್ಲಿ ರೂ.1.50ಲಕ್ಷ ಸಹಾಯಧನ ಮತ್ತು ರೂ.1ಲಕ್ಷ ನಿಗಮದಿಂದ ಸಾಲ ಒದಗಿಸಲಾಗುವುದು.
*ಭೂ ಒಡೆತನ ಯೋಜನೆ: ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ 0.20 ಎಕರೆ ಮೇಲ್ಪಟ್ಟು ಘಟಕವೆಚ್ಚದಲ್ಲಿ ಗರಿಷ್ಟ ಎಷ್ಟು ವಿಸ್ತೀರ್ಣ ಬರುತ್ತದೆಯೋ ಅಷ್ಟು ಜಮೀನನ್ನು ಖರೀದಿಸಿ ಕೊಡಲಾಗುವುದು.
*ಗಂಗಾ ಕಲ್ಯಾಣ ಯೋಜನೆ: ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಖುಷ್ಕಿ/ಒಣ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ ಕಚೇರಿ ಹಾಗೂ ವೆಬ್‍ಸೈಟ್ ತಿತಿತಿ.suviಜhಚಿ.ಞಚಿಡಿಚಿಟಿಚಿಣಚಿಞ.gov.iಟಿ ಅಥವಾ ದೂರವಾಣಿ ಸಂಖ್ಯೆ: 08132-23309 ಯನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಕರ್ನಾಟಕ ಮಹರ್ಷಿ ವಾಲ್ಮೀಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *