ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಜು.23 ರಂದು ಮ.01.30 ಕ್ಕೆ ಹೊನ್ನಾಳಿ ತಾಲ್ಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂ.06.30 ಕ್ಕೆ ನ್ಯಾಮತಿ ತಾಲ್ಲೂಕಿನ ಕುಂಕುವಾ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವರು. ರಾ.07.45 ಕ್ಕೆ ಹೊನ್ನಾಳಿ ತಾಲ್ಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವರು.
ಜು.24 ರಂದು ಬೆ.12 ಗಂಟೆಗೆ ಹೊನ್ನಾಳಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘ, ಕಛೇರಿಯ ಉದ್ಘಾಟನೆ ನೆರವೇರಿಸುವರು. ಮ.03.30 ಕ್ಕೆ ಚೀಲೂರು ಗ್ರಾಮದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂ.05.30 ಕ್ಕೆ ಹೊನ್ನಾಳಿ ತಾಲ್ಲೂಕಿನ ಹೆಚ್.ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿರುವ ಎನ್.ಎಸ್.ಎಸ್. ಕ್ಯಾಂಪ್ನ ಉದ್ಘಾಟನೆ ನೆರವೇರಿಸುವರು.
ಜು.25 ರಂದುಯ ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿ ತಾಲ್ಲೂಕು ಪಂಚಾಯತಿ ಸಾಮಥ್ರ್ಯ ಸೌಧದಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸುವರು. ನಂತರ ಅದೇ ದಿನ ರಾತ್ರಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.