ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದ ಫಲಾನುಭವಿಗಳ ಮಕ್ಕಳು 2022-23 ನೇ ಶೈಕ್ಷಣಿಕ ವರ್ಷದಲ್ಲಿ 01 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತಹ ಮಕ್ಕಳ ಮಾಹಿತಿಯನ್ನು ಹತ್ತಿರದ ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ (ಕಟ್ಟಡ ಕಾರ್ಮಿಕರ ಗುರುತಿನ ಚೀಟಿ, ವ್ಯಾಸಂಗ ಪ್ರಮಾಣ ಪತ್ರ ಮತ್ತು ಆಧಾರ್ ಕಾರ್ಡ್) ಸೂಕ್ತ ದಾಖಲೆಗಳೊಂದಿಗೆ ಆಗಸ್ಟ್.03 ರೊಳಗಾಗಿ ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.