ಜಿಲ್ಲೆಯಲ್ಲಿ ಜುಲೈ 27 ರಂದು 24.4 ಮಿ.ಮೀ. ಸರಾಸರಿ ಮಳೆಯಾಗಿದ್ದು, 16.10 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ
ಚನ್ನಗಿರಿಯಲ್ಲಿ ವಾಡಿಕೆ ಮಳೆ 6.3 ಮಿ.ಮೀ ಹಾಗೂ ವಾಸ್ತವ ಮಳೆ 33.1 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 2.8 ಮಿ.ಮೀ ಹಾಗೂ ವಾಸ್ತವ ಮಳೆ 23.8 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 2.1 ಮಿ.ಮೀ ಹಾಗೂ ವಾಸ್ತವ ಮಳೆ 42.1 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 3.8 ಮಿ.ಮೀ ಹಾಗೂ ವಾಸ್ತವ ಮಳೆ 19.9 ಮಿ.ಮೀ, ಜಗಳೂರು ವಾಡಿಕೆ ಮಳೆ 1.5 ಮಿ.ಮೀ ಹಾಗೂ ವಾಸ್ತವ ಮಳೆ 7.2 ಮಿ.ಮೀ,  ನ್ಯಾಮತಿಯಲ್ಲಿ ವಾಡಿಕೆ ಮಳೆ 6.1 ಮಿ.ಮೀ ಹಾಗೂ ವಾಸ್ತವ ಮಳೆ 25.6 ಮಿ.ಮೀ ಮಳೆÉಯಾಗಿದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ  ಮನೆ ಭಾಗಶ: ಹಾನಿಯಾಗಿದ್ದು, ರೂ. 1.20 ಲಕ್ಷ, 6 ಕಚ್ಚಾಮನೆ ಭಾಗಶಃ ಹಾನಿಯಾಗಿದ್ದು ರೂ.0.30ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ. 0.40 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ.1.00ಲಕ್ಷ, 1 ಕಚ್ಚಾಮನೆ ಭಾಗಶಃ ಹಾನಿಯಾಗಿದ್ದು, ರೂ.0.30 ಲಲಕ್ಷ ಹಾಗೂ 2 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ..050 ಲಕ್ಷ ಒಟ್ಟು ರೂ.1.80 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ  ಹಾನಿಯಾಗಿದ್ದು, ರೂ. 2.50 ಲಕ್ಷ, 4 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ. 3.00 ಲಕ್ಷ ಹಾಗೂ 15.00 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ 2.70 ಲಕ್ಷ ಒಟ್ಟು ರೂ.10.20 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ
ಜಿಲ್ಲೆಯಲ್ಲಿ ಒಟ್ಟಾರೆ ರೂ. 16.10 ಲಕ್ಷ   ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *