ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ವರ್ಷದಲ್ಲಿ ಆಚರಿಸುತ್ತಿರುವ ಈ ವರ್ಷದ ಸ್ವಾತಂತ್ರ್ಯ ದಿನವನ್ನು ಅಚ್ಚ ಹಸುರಾಗಿಸಲು ಬಹಳ ಅರ್ಥಪೂರ್ಣವಾಗಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ವೀರರ ನೆನಪನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಆಚರಿಸಬೇಕಾಗಿದೆ  ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆಯ ಪೂರ್ವಭಾವಿ ಸಭೆಯಲ್ಲಿ  ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕಿದೆ. ಸರ್ಕಾರಿ ಕಚೇರಿಗಳಲ್ಲಿ ಹಳೆಯ ಧ್ವಜಗಳ ಬದಲಿಗೆ ಕಡ್ಡಾಯವಾಗಿ ಹೊಸ ಧ್ವಜ ಖರೀದಿಸಿ ಧ್ವಜ ಸಂಹಿತೆ ಪ್ರಕಾರ ಧ್ವಜಾರೋಹಣ ನೆರವೇರಿಸಬೇಕು. ಕಡ್ಡಾಯವಾಗಿ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಗೈರಾಗದೇ ಹಾಜರಿರಬೇಕು. ಅಂದು ಬೆಳಿಗ್ಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಜಿಲ್ಲಾ ಮಟ್ಟದ ಇಲಾಖಾ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಅಂದು ಬೆಳಿಗ್ಗೆ 7.30 ಗಂಟೆಗೆ ತಪ್ಪದೇ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ, ನಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೆಳಿಗ್ಗೆ 7.50 ಕ್ಕೆ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಹಾಜರಿರುವಂತೆ ಸೂಚಿಸಿದರು.
    ಆಗಸ್ಟ್ 15 ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸಲಿದ್ದು, ಈ ಬಾರಿ ಡಿಆರ್, ಸಿವಿಲ್, ಹೋಂಗಾರ್ಡ್ ಅರಣ್ಯ ಮತ್ತು ಅಗ್ನಿ ಶಾಮಕದಳ ಎನ್‍ಸಿಸಿ, ಸ್ಕೌಟ್ ಮತ್ತು ಗೈಡ್ಸ್ ಹಾಗೂ ಇತರೆ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ.
    ಧ್ವಜಾರೋಹಣದ ನಂತರ ಜಿಲ್ಲಾ ಉಸ್ತುವಾರಿ ಸಚಿವರು 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕುರಿತು ಸಂದೇಶ ನೀಡುವರು. ಧ್ವಜಾರೋಹಣದ ಪೂರ್ವ ಸಿದ್ದತೆ, ಧ್ವಜ ಕಟ್ಟುವ ಇತರೆ ಜವಾಬ್ದಾರಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು, ಉಪ ನಿರೀಕ್ಷಕರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮತ್ತು ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿ ಇವರಿಗೆ ಜವಾಬ್ದಾರಿ ವಹಿಸಲಾಯಿತು.
    ವೇದಿಕೆ ನಿರ್ಮಾಣ, ಶಾಮಿಯಾನ, ವಿದ್ಯುತ್ ದೀಪಾಲಂಕಾರ ಇತರೆ ವ್ಯವಸ್ಥೆಗಳನ್ನು ಪಾಲಿಕೆ ಆಯುಕ್ತರು, ನೀರಿನ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆ, ವೇದಿಕೆಗೆ ಹೂಕುಂಡ, ಅಲಂಕಾರ ವ್ಯವಸ್ಥೆಯನ್ನು ತೋಟಗಾರಿಕೆ ಇಲಾಖೆಯವರು ವಹಿಸಬೇಕೆಂದರು.
ಸರ್ಕಾರಿ ಕಟ್ಟಡಗಳ ಮೇಲೆ ದೀಪಾಂಲಕಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಆಗಸ್ಟ್ 14 ಮತ್ತು 15 ರಂದು ವಿದ್ಯುತ್ ದೀಪಾಂಲಕಾರ ಮಾಡಲು ಆಯಾ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ನಗರದ ಮುಖ್ಯ ವೃತ್ತಗಳಾದ ಜಯದೇವ ವೃತ್ತ, ಹೊಂಡದ ವೃತ್ತ, ಗುಂಡಿ ವೃತ್ತ, ಗಾಂಧಿ ವೃತ್ತ, ರಾಮ್ ಅಂಡ್ ಕೋ ವೃತ್ತ, ಕೆ.ಇ.ಬಿ ವೃತ್ತ, ಶಿವಪ್ಪ ವೃತ್ತ, ಹಗೆದಿಬ್ಬ ವೃತ್ತ, ಶಿವಾಜಿ ವೃತ್ತ ಅಂಬೇಡ್ಕರ್ ವೃತ್ತ ಮುಂತಾದ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಮಾಡಲು ಅಭಿಯಂತರರು, ಕೆಆರ್‍ಐಡಿಎಲ್ ದಾವಣಗೆರೆ ಇವರಿಗೆ ವಹಿಸಲಾಯಿತು.
ಸನ್ಮಾನ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ:  ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿರುವ ಮತ್ತು ದಾವಣಗೆರೆ ನಗರದಲ್ಲಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಈ ಕುರಿತು ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯನ್ನು ಸಿದ್ದಪಡಿಸಿ, ಜಿಲ್ಲಾಧಿಕಾರಿಗಳ ಅನುಮೋದನೆ ಪಡೆಯುವಂತೆ ತಹಶೀಲ್ದಾರ್ ದಾವಣಗೆರೆ ಅವರಿಗೆ ಸೂಚಿಸಲಾಯಿತು.
ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿವಿಧ ಅಭ್ಯರ್ಥಿಗಳಿಗೆ ಬಹುಮಾನ (ಬೆಳಗಿನ ಕಾರ್ಯಕ್ರಮ ಮತ್ತು ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಸೇರಿ) ವಿತರಿಸಲು ಅಗತ್ಯವಿರುವ ವಿವಿಧ ರೀತಿಯ ಪ್ರಮಾಣ ಪತ್ರಗಳನ್ನು ಮುದ್ರಿಸಿಕೊಡುವ ಜವ್ದಾಬಾರಿಯನ್ನು ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ದಾವಣಗೆರೆ ಇವರಿಗೆ ವಹಿಸಲಾಯಿತು.
    ಸನ್ಮಾನಿತರಿಗೆ  ಶಾಲು, ಕೆಂಪು ಗುಲಾಬಿ ಹೂ ಹಾಗೂ ಜಿಲ್ಲೆಯ ಪ್ರತಿಷ್ಟಿತ ಬರಹಗಾರರ ಒಂದು ಪುಸ್ತಕವನ್ನು ನೀಡುವ ವ್ಯವಸ್ಥೆಯನ್ನು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಜಿ.ಪಂ, ಕಾರ್ಯಪಾಲ ಅಭಿಯಂತರರು, ಪಿ.ಆರ್‍ಇಡಿ ಮತ್ತು ಕಾರ್ಯಪಾಲಕ ಅಭಿಯಂತರರು, ಆರ್‍ಡಬ್ಲ್ಯೂಎಸ್‍ಡಿ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರುಗಳು ಜಂಟಿಯಾಗಿ ನಿರ್ವಹಿಸುವಂತೆ ಸಭೆಯಲ್ಲಿ ಸೂಚಿಲಾಯಿತು.
  ವಿವಿಧ ಇಲಾಖೆಗಳ ಪ್ರಗತಿ ವಿವರ ಹಾಗÀೂ ಭಾಷಣ ತಯಾರಿ, ಶಿಷ್ಟಾಚಾರ ಪಾಲನೆ, ಮಕ್ಕಳಿಗೆ ಸಿಹಿಹಂಚಿಕೆ, ಉಪಹಾರದ ವ್ಯವಸ್ಥೆ, ಸಮಾರಂಭದ ಮೇಲುಸ್ತುವಾರಿ, ಉಪಹಾರದ ವ್ಯವಸ್ಥೆಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಯಿತು.
 
 
  ಪ್ಲಾಸ್ಟಿಕ್ ಧ್ವಜಗಳನ್ನು ಕಡ್ಡಾಯವಾಗಿ ಬಳಸುಂತಿಲ್ಲ. ಒಂದು ಪಕ್ಷ ಅಂಗಡಿಗಳಲ್ಲಿ, ವ್ಯಾಪಾರ ವಹಿವಾಟು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ಬಳಕೆ ಮಾಡಿದಲ್ಲಿ ಅಂತಹವರ ವಿರುದ್ದ ಮಾಲಿನ್ಯ ನಿಯಂತ್ರಣ ಮಂಡಳಿಯವರು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
                                      -ಜಿಲ್ಲಾಧಿಕಾರಿ – ಶಿವಾನಂದ ಕಾಪಶಿ
 
   
 
ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಸಿ.ಬಿ ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಡಿಹೆಚ್‍ಓ ನಾಗರಾಜ್, ಡಿಡಿಪಿಐ ತಿಪ್ಪೇಶಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ವಾಸಂತಿ ಉಪ್ಪಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *