ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಜುಲೈ 30 ರಿಂದ ಆಗಸ್ಟ್ 02 ರ ವರಗೆ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಜು.30 ರಂದು ಬೆ.11 ಕ್ಕೆ ಹೊನ್ನಾಳಿ ತಾಲ್ಲೂಕು ಪಂಚಾಯತಿಯ ಸಾಮಥ್ರ್ಯಸೌಧದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ:12 ಗಂಟೆಗೆ ಹೊನ್ನಾಳಿಯ ಹಿರೇಕಲ್ಮಠ ಕೆರೆ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸುವರು. ಮ.12.30 ಕ್ಕೆ ಬೇಲಿಮಲ್ಲೂರು ಪಶು ಆಸ್ಪತ್ರೆಯಲ್ಲಿ ನಿವೃತ್ತಿ ಹೊಂದುತ್ತಿರುವ ಶ್ರೀ ಚಂದ್ರಪ್ಪ ಇವರ ಬೀಳ್ಕೊಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಮ.01.30 ಕ್ಕೆ ಯಕ್ಕನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸಮುದಾಯ ಭವನದÀಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.2.30 ಕ್ಕೆ ಹೊನ್ನಾಳಿಗೆ ಪ್ರಾಯಾಣ. ಮ.3.30ಕ್ಕೆ ಕತ್ತಿಗೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಆಯೋಜನೆ ಬಗ್ಗೆ ಪೂರ್ವಭಾವಿ ಸಭೆ ನಡೆಸುವರು. ಸಂ.4.30ಕ್ಕೆ ಫಲವನಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಆಯೋಜನೆ ಬಗ್ಗೆ ಪೂರ್ವಭಾವಿ ಸಭೆ ನಡೆಸುವರು. ಸಂ.6.30ಕ್ಕೆ ಶಿವಮೊಗ್ಗ ತಾಲ್ಲೂಕಿನ ಮತ್ತೂರು ಗ್ರಾಮಕ್ಕೆ ಭೇಟಿ ನೀಡುವರು. ರಾ.8.30 ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ ಮಾಡುವರು.
ಜು.31 ರಂದು ಬೆ.11 ಕ್ಕೆ ಕಮ್ಮಾರಗಟ್ಟೆ ಗ್ರಾಮದಲ್ಲಿ ಕೆರೆಯ ಜಾಕ್‍ವೆಲ್ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.12 ಕ್ಕೆ ಮಾದನಭಾವಿ ಗ್ರಾಮದಲ್ಲಿ ಸಿ.ಸಿ. ರಸ್ತೆ ಉದ್ಘಾಟನೆ ನೆರವೇರಿಸುವರು. ಮ.1 ಕ್ಕೆ ಅರಬಗಟ್ಟೆ ಗ್ರಾಮದಲ್ಲಿ ಸಿ.ಸಿ. ರಸ್ತೆ ಉದ್ಘಾಟನೆ ನೆರವೇರಿಸುವರು. ಮ.2.15ಕ್ಕೆ ಸೊರಟೂರು ಗ್ರಾಮದಲ್ಲಿ ಸಿ.ಸಿ. ರಸ್ತೆ ಉದ್ಘಾಟನೆ ನೆರವೇರಿಸುವರು. ಸಂ.4.30ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ಹೊನ್ನಾಳಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವರು. ನಂತರ ಹೊನ್ನಾಳಿಯಲ್ಲಿ ವಾಸ್ತವ್ಯ ಮಾಡುವರು.
ಆ.01 ರಂದು ಬೆ.11ಕ್ಕೆ ಚಿನ್ನಿಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯುವ ವಲಯ ಮಟ್ಟದ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸುವರು. ಮ.12.30ಕ್ಕೆ ಗೋವಿನಕೋವಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶಾರದಾದೇವಿ ಮೂರ್ತಿಯ ಲೋಕಾರ್ಪಣೆ ಮಾಡುವುದು ಹಾಗೂ ಸಿ.ಸಿ. ರಸ್ತೆ ಉದ್ಘಾಟನೆ ನೆರವೇರಿಸುವರು. ಮ.3ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ಹೊನ್ನಾಳಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವರು. ಸಂ.6.30ಕ್ಕೆ ಹೆಚ್.ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಬಗ್ಗೆ ಪರಿಶೀಲನೆ ನಡೆಸುವರು. ರಾ.09 ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ ಮಾಡುವರು.
ಆ.02 ರಂದು ಬೆ.11 ಕ್ಕೆ ಹೊನ್ನಾಳಿ ತಾಲ್ಲೂಕಿನ ಹೆಚ್.ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ರಾ.08 ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ