ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಇವರು ಆಗಸ್ಟ್ 2022ರ ಮಾಹೆಯಲ್ಲಿ ದಾವಣಗೆರೆ ಮತ್ತು ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆ ದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್ಗೆ ಆಗಮಿಸುವರು. ನಂತರ ಬೆ.10.30ಕ್ಕೆ ವೆಂಕಭೋವಿ ಕಾಲೋನಿ, ಅರಳೀಮರದ ಸರ್ಕಲ್ ದಾವಣಗೆರೆ ಇಲ್ಲಿ ಆಯೋಜಿಸಲಾಗಿರುವ ಶ್ರೀಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕಾರ್ಯಕ್ರಮದ ನಂತರಬೆ.11.15ಕ್ಕೆಆನೆಗುಂದಿಗೆ ತೆರಳುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.