ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಪ್ರತಿ ತಿಂಗಳು ಮೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..
ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ಆಗಸ್ಟ್ 6 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಪೂರ್ವಸಿದ್ದತೆಯನ್ನು ಗ್ರಾಮದ ಲಕ್ಷ್ಮಿರಂಗನಾಥಸ್ವಾಮಿ ದೇವಸ್ಥಾನದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಪೂರ್ವಸಿದ್ದತಾ ಸಭೆ ನಡೆಸಿ ಅವರು ಮಾತನಾಡಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಇದೂವರೆಗೂ 18 ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾಡಿದ್ದು, ಇದೂವರೆಗೂ ಮಾಡಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ಯಶಸ್ವಿಯಾಗಿದ್ದು, ಕಂದಾಯ ಸಚಿವರೂ ಕೂಡ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆಂದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಇದರ ಮೂಲಕ ಶೇ 50 ರಿಂದ 60 ರಷ್ಟು ಸಾರ್ವಜನಿಕರ ಸಮಸ್ಯೆಗಳು ಬಗೆ ಹರಿಯುತ್ತಿವೆ ಎಂದರು.
ಅಧಿಕಾರಿಗಳು ಕೇವಲ ಎಸಿ ಕಚೇರಿಯಲ್ಲಿ ಕುಳಿತ ಕೆಲಸ ಮಾಡಿದರೆ ಸಾಲದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರ ಮನೆ ಬಾಗಿಲಿಗೆ ಹೋಗಿ ಜನರ ಸಮಸ್ಯೆಯನ್ನು ಹಾಲಿಸುವ ಮೂಲಕ ಅವರ ಸಮಸ್ಯೆಗಳನ್ನು ಬಗೆ ಹರಿಸ ಬೇಕೆನ್ನುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಈ ಹಿಂದೆ ಹೊನ್ನಾಳಿ ತಾಲೂಕಿನಲ್ಲಿ ಅತಿ ಹೆಚ್ಚು ಜನಸ್ಪಂಧನ ಕಾರ್ಯಕ್ರಮ ಮಾಡಿದ ಹೆಗ್ಗಳಿಗೆ ನಮ್ಮ ತಾಲೂಕಿನದ್ದಾಗಿದ್ದು ಅದೇ ರೀತಿ ಅವಳಿ ತಾಲೂಕಿನ ಪ್ರತಿಯೊಂದು ಗ್ರಾ.ಪಂ ನಲ್ಲೂ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾಡ ಬೇಕೆಂಬುದು ನನ್ನ ಕನಸಾಗಿದೆ ಎಂದರು.
ಕಳೆದ ಕೆಲ ದಿನಗಳ ಹಿಂದೆ ಸುರಿದ ಬಾರೀ ಮಳೆಯಿಂದಾಗಿ ಅವಳಿ ತಾಲೂಕಿನಲ್ಲಿ 12,553 ಎಕರೆ ಬೆಳೆಹಾನಿಯಾಗಿದ್ದು, ಇದರಲ್ಲಿ 12,290 ಎಕರೆ ಮೆಕ್ಕೆಜೋಳ,155 ಎಕರೆ ಹತ್ತಿ,103 ಎಕರೆ ಶೇಂಗಾ ಸೇರಿದಂತೆ ಇತರ ಬೆಳೆಗಗಳಿಗೆ ಹಾನಿಯಾಗಿದೇ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ.
ಆದರೇ ಕಂದಾಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ಮಾಡುವ ಮೂಲಕ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸರ್ವೇ ಮಾಡಿ ವಾಸ್ತವಾಂಶ ವರದಿ ನೀಡುವಂತೆ ಸೂಚಿಸಿದ್ದೇನೆಲ್ಲದೇ, ಬೆಳೆ ಹಾಗೂ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದರು.
ಮಳೆಯಿಂದಾಗಿ ಮನೆಹಾನಿಯಾದವರಿಗೆ ಎ ಶ್ರೇಣಿಗೆ 5 ಲಕ್ಷ ,ಬಿ 2 ಶ್ರೇಣಿಗೆ 5 ಲಕ್ಷ ಹಾಗೂ ಸಿ ಶ್ರೇಣಿಯ ಮನೆ ಹಾನಿಗೆ 50 ಸಾವಿರ ಪರಿಹಾರ ಕೊಡಲಾಗುವುದೆಂದ ಶಾಸಕರು, ಅಧಿಕಾರಿಗಳು
ಯಾವುದೇ ಕಾರಣಕ್ಕೂ ಜನರ ಬಳಿ ಹಣ ಕೇಳದೇ ಪ್ರಾಮಾಣಿಕವಾಗಿ ವಾಸ್ತವಾಂಶ ವರದಿ ಸಿದ್ದಪಡಿಸುವಂತೆ ಖಡಕ್ ಎಚ್ಚರಿಕೆ ನೀಡಿದರು.
ಈ ಸಂದರ್ಭ ತಹಶೀಲ್ದಾರ್ ರೇಣುಕಾ, ಇಓ ರಾಮಭೋವಿ ಸೇರಿದಂತೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

Leave a Reply

Your email address will not be published. Required fields are marked *