ಸಾಗರ: ನಗರಸಭೆಯ ಗಾಂಧಿಮೈದಾನದ ರಂಗಮಂದಿರದಲ್ಲಿ ಭಾನುವಾರ ತಾಲ್ಲೂಕು
ಆಡಳಿತ ಮತ್ತು ನಗರಸಭೆ ವತಿಯಿಂದ ಆ. 13ರಿಂದ 15ರವರೆಗೆ ಹರ್ ಘರ್ ತಿರಂಗ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರತಿ ಮನೆಯ ಮೇಲೂ ತ್ರಿವರ್ಣ ರಾಷ್ಟ್ರಧ್ವಜ ಹಾರಿಸಲು 50ಸಾವಿರ ರಾಷ್ಟ್ರಧ್ವಜ ಕಟ್ಟುವ ಕೆಲಸಕ್ಕೆ ಸಾಗರ ಹೊಸನಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಚಾಲನೆ ನೀಡಿದರು.
ರಾಷ್ಟ್ರದ ಪ್ರತಿಯೊಂದು ಮನೆಯ ಮೇಲೂ ಮೂರು ದಿನಗಳ ಕಾಲ ರಾಷ್ಟ್ರಧ್ವಜ ಹಾರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಈ
ರಾಷ್ಟ್ರೀಯ ಕಾರ್ಯಕ್ರಮ ನೆನಪಿನಲ್ಲಿ ಉಳಿಯುವಂತೆ ಆಚರಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವವಾಗಿದೆ.
ಸಾಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಒಟ್ಟು 50ಸಾವಿರ ರಾಷ್ಟ್ರಧ್ವಜವನ್ನು ಎಲ್ಲ
ಮನೆಗಳಿಗೂ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಇಂದು ಅಧಿಕೃತವಾಗಿ ಧ್ವಜ ತಯಾರಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ನಾವು ನೀಡಿದ ರಾಷ್ಟ್ರಧ್ವಜ ಮನೆಯ ಮೇಲೆ ಹಾರಿಸಲು ಅವಕಾಶವಾಗುವಂತೆ ಎಲ್ಲ ರೀತಿಯ ಸಿದ್ದತೆ ಮಾಡಿ ವಿತರಣೆ ಮಾಡಲಾಗುತ್ತಿದೆ.
ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಪೌರಾಯುಕ್ತ ರಾಜು ಡಿ.ಬಣಕಾರ್,ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್,ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಾ ಕಮ್ಮಾರ್, ಹೊಸನಗರ ತಹಶೀಲ್ದಾರ್ ರಾಜೀವ್ ,ಸದಸ್ಯರಾದ ಟಿ.ಡಿ.ಮೇಘರಾಜ್, ಗಣೇಶಪ್ರಸಾದ್, ಮೈತ್ರಿ ಪಾಟೀಲ್, ಕುಸುಮಸುಬ್ಬಣ್ಣ, ನಾದಿರಾ ಪರ್ವಿನ್, , ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಪರಮೇಶ್ವರಪ್ಪ, ಪ್ರಮುಖರಾದ ಲೋಕನಾಥ್ ಬಿಳಿಸಿರಿ,ಸಂತೋಷ್ ಶೇಟ್, ಪುರುಷೋತ್ತಮ್, ಸತೀಶ್ ಕೆ. ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಸಂಸ್ಥೆಗಳ ಪ್ರಮುಖರು ಹಾಜರಿದ್ದರು