ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ದಾವಣಗೆರೆ ಮತ್ತು ಭಾರತೀಯ ಕಲಾ ಸಂಸ್ಕøತಿಕ ಅಕಾಡೆಮಿ ದಾವಣಗೆರೆ ಇವರ ಸಹಯೋಗದಲ್ಲಿ ಮಾನಸಧಾರ ಸಮುದಾಯ ಮಾನಸಿಕ ಆರೋಗ್ಯ ಕೇಂದ್ರ ಉದ್ಘಾಟನೆ ಕಾರ್ಯಕ್ರಮವನ್ನು ಆಗಸ್ಟ್.02 ರ ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಡಿ.ಸಿ.ಎಂ ಲೇಔಟ್ ಪಿ.ಬಿ ರಸ್ತೆ ದಾವಣಗೆರೆ ಇಲ್ಲಿ ಉದ್ಘಾಟನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಉದ್ಘಾಟಿಸುವರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ.ಎ ಚನ್ನಪ್ಪ ಅಧ್ಯಕ್ಷತೆ ವಹಿಸುವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ನಾಗರಜ, ಜಿಲ್ಲಾ ಚಿಗಟೇರಿ ಆಸ್ಪತ್ರೆ ಅಧೀಕ್ಷಕರು ಡಾ. ಷಣ್ಮುಖಪ್ಪ ಎಸ್, ಜಿಲ್ಲಾ ಕುಷ್ಟರೋಗ ನಿವಾರಣ ಅಧಿಕಾರಿಗಳು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ಡಾ. ಮುರುಳಿಧರ ಪಿ.ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಕೌಸರ್ ರೇμÁ್ಮ, ಚಿಗಟೇರಿ ಆಸ್ಪತ್ರೆ ಜಿಲ್ಲಾ ಮನೋವೈದ್ಯರು, ಮನೋವೈದ್ಯಕೀಯ ವಿಭಾಗದ ಡಾ. ಮರಳುಸಿದ್ದಪ್ಪ, ಜಿಲ್ಲಾ ವಿಕಲಚೇತನರ ಅಧಿಕಾರಿಗಳು ಡಾ. ಕೆ.ಕೆ ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಹಾಗೂ ಎಲ್ಲಾ ಕಾರ್ಯಕ್ರಮದ ಅನುμÁ್ಠನಾಧಿಕಾರಿಗಳು ಪಾಲ್ಗೊಳ್ಳುವವರೆಂದು ಪ್ರಕಟಣೆ ತಿಳಿಸಿದೆ.