ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸುದ್ದಿಗಾರರರೊಂದಿಗೆ ಮಾತನಾಡಿದ ರೇಣುಕಾಚಾರ್ಯ ಮಳೆಯಿಂದಾಗಿ ಅವಳಿ ತಾಲೂಕಿನಲ್ಲಿ ಸಾಕಷ್ಟು ಹಾನಿಯಾಗಿದ್ದು ಅವಳಿ ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕು ಎಂದು ಘೋಷಣೆ ಮಾಡುವುದರ ಜೊತೆಗೆ, ಅತಿ ಹೆಚ್ಚು ಅನುದಾನವನ್ನು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿಗೆ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದರು.
ಕಳೆದ ಕೆಲ ದಿನಗಳ ಹಿಂದೆ ಸುರಿದ ಬಾರೀ ಮಳೆ ರೈತರಿಗೆ ಶಾಪವಾಗಿ ಪರಿಣಮಿಸಿದ್ದು ರೈತರು ಬೆಳೆದ ಬೆಳೆಗಳೆಲ್ಲಾ ನೀರು ಪಾಲಾಗಿದ್ದು, ಸುಮಾರು 25000 ಕ್ಕೂ ಹೆಚ್ಚು ಎಕರೆ ಕೃಷಿ ಬೆಳೆಗಳು, ಒಂದು ಸಾವಿರ ಹೆಕ್ಟೇರ್ಗೂ ಹೆಚ್ಚು ತೋಟಗಾರಿಕೆ ಬೆಳೆಗಳು ಹಾಳಾಗಿವೆ ಎಂದು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದರು.
ಅಷ್ಟೇ ಅಲ್ಲದೇ ಅವಳಿ ತಾಲೂಕಿನಾಧ್ಯಂತ ಮನೆಗಳು, ಕರೆಕಟ್ಟೆಗಳು, ನಾಲೆಗಳು,ರಸ್ತೆಗಳು, ಸೇತುವೆಗಳು, ವಿದ್ಯುತ್ ಕಂಬಗಳು, ಶಾಲಾಕಟ್ಟಡಗಳು ಸೇರಿದಂತೆ ಸಾಕಷ್ಟು ಹಾನಿದ್ದು ಅವಳಿ ತಾಲೂಕಿನ ಜನರು ಸಂಷ್ಟಕ್ಕೆ ಸಿಲುಕಿದ್ದು ಅವಳಿ ತಾಲೂಕನ್ನು ಅತಿವೃಷ್ಡಿ ಪೀಡಿತ ತಾಲೂಕು ಎಂದು ಘೋಷಣೆ ಮಾಡಿ, ಅವಳಿ ತಾಲೂಕಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಮುಖ್ಯಮಂತ್ರಿಗಳು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆಂದರು.
ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್, ಮಾಜಿ ಪುರಸಭೆ ಅಧ್ಯಕ್ಷ ಕೆ.ವಿ.ಶ್ರೀಧರ್,ಮಾಜಿ ತಾ.ಪಂ.ಸದಸ್ಯ ಶಿವಾನಂದ್,ಮಾಜಿ ತಾ.ಪಂ ಅಧ್ಯಕ್ಷ ಎಸ್.ಪಿ.ರವಿಕುಮಾರ್ ಸೇರಿದಂತೆ ಚೇತನ್, ಶರತ್ ಮತ್ತೀತತರಿದ್ದರು