ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಆಗಸ್ಟ್ 06 ರಿಂದ ಆಗಸ್ಟ್ 09 ರ ವರಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಆ.06 ರಂದು ಬೆ.11 ಕ್ಕೆ ಹೊನ್ನಾಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ನೆರವೇರಿಸುವರು ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸುವರು. ಬೆ.11.30 ರಿಂದ ಸಂ.7 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವರು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ ಮಾಡುವರು.
ಆ. 07 ರಂದು ಬೆ.11 ಕ್ಕೆ ಹೊನ್ನಾಳಿಯ ಹಿರೇಕಲ್ಮಠದಲ್ಲಿ ನಡೆಯುವ ಅಂತರ ಜಿಲ್ಲಾ ಮಟ್ಟದ ಎನ್.ಎಸ್.ಎಸ್. ಕ್ಯಾಂಪ್ ಉದ್ಘಾಟನೆ ನೆರವೇರಿಸುವರು. ಮ.12.30 ಕ್ಕೆ ನ್ಯಾಮತಿಯ ನಾಮದೇವ ಸಿಂಪಿ ಸಮಾಜದ ವತಿಯಿಂದ ಆಯೋಜಿಸಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.01 ರಿಂದ ಸಂ.07 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವರು. ನಂತರ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ ಮಾಡುವರು.
ಆ.08 ರಂದು ಬೆ.10 ಕ್ಕೆ ನ್ಯಾಮತಿ ಪ್ರಥಮ ದರ್ಜೆ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ.11 ಕ್ಕೆ ಹೊನ್ನಾಳಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸುವರು. ಮ.01 ಕ್ಕೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅತಿವೃಷ್ಟಿಯ ಪರಿಣಾಮದ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮ.04 ಕ್ಕೆ ಸಾರ್ವಜನಿಕರ ಕುಂದುಕೊರತೆಗಳ ಅಹ್ವಾಲುಗಳನ್ನು ಸ್ವೀಕರಿಸುವುದು ಮತ್ತು ಹೊನ್ನಾಳಿಯಲ್ಲಿ ವಾಸ್ತವ್ಯ ಮಾಡುವರು.
ಆ.09 ರಂದು ಬೆ.09 ಕ್ಕೆ ಹೊನ್ನಾಳಿಯ ಅಂತರ ಜಿಲ್ಲಾ ಮಟ್ಟದ ಎನ್.ಎಸ್.ಎಸ್. ಕ್ಯಾಂಪ್‍ನ ರ್ಯಾಲಿಯಲ್ಲಿ ಭಾಗವಹಿಸುವರು ಹಾಗೂ ಹರ್‍ಘರ್ ತಿರಂಗ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು ನಂತರ ರಾ.08 ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *