ಚಿತ್ರದುರ್ಗ ಆಗಸ್ಟ್ 3 ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದಲ್ಲಿ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳನ್ನು ವಿರೋಧ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಶ್ರೀಮಠಕ್ಕೆ ತೆರಳಿ ಗುರುಗಳ ಆಶೀರ್ವಾದವನ್ನು ಪಡೆದು, ತದಾದ ನಂತರ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಸಿದ್ದರಾಮಯ್ಯನವರು ಸಮಾಲೋಚನೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್ ಆಂಜನೇಯ ಚಳ್ಳಿಕೇರಿ ತಾಲೂಕಿನ ಹಾಲಿ ಶಾಸಕರಾದ ರಘುಮೂರ್ತಿಯವರು ಕಾಂಗ್ರೆಸ್ ಪಕ್ಷದ ಮುಖಂಡರು ಸಹ ಭಾಗಿಯಾಗಿದ್ದರು.